ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಕೊರೋನಾ ಹಿನ್ನೆಲೆ ಜಿಲ್ಲೆಯ ಹಿರಿಯೂರು ತಾಲೂಕಿನ ಕೋಡಿಹಳ್ಳಿಯ ರೇಣುಕಾ ಪರಮೇಶ್ವರಿ ಜಾತ್ರಾ ಮಹೋತ್ಸವಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯನ್ನು ನಿಷೇಧಿಸಲಾಗಿದೆ ಎಂದು ದೇವಾಲಯ ಕಮಿಟಿ ತಿಳಿಸಿದೆ.
ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಮಾರ್ಗಸೂಚಿಗಳ ಅನ್ವಯ ಮಾರ್ಚ್ 26ರಿಂದ 30ರವರೆಗೆ ನಡೆಯಲಿರುವ ರೇಣುಕಾ ಪರಮೇಶ್ವರಿ ಅಮ್ಮನವರ ಜಾತ್ರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಜಾತ್ರೆಗೆ ಸ್ಥಳೀಯರನ್ನು ಹೊರತುಪಡಿಸಿ ಹೊರ ರಾಜ್ಯ ಮತ್ತು ಹೊರ ಜಿಲ್ಲೆಯಿಂದ ಬರುವ ಭಕ್ತಾದಿಗಳಿಗೆ ಸಂಪೂರ್ಣ ನಿಷೇಧವಿರುತ್ತದೆ. ಜಾತ್ರೆಯಲ್ಲಿ ಪ್ರಾಣಿಬಲಿ ಮತ್ತು ಅರೆಬೆತ್ತಲೆ ಸೇವೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.
ಭಕ್ತಾದಿಗಳು ಕೋಡಿಹಳ್ಳಿ ಗ್ರಾಮದ ಸುತ್ತಮುತ್ತ 3ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಟೆಂಟ್/ವಸತಿಯನ್ನು ನಿರ್ಮಿಸಿಕೊಳ್ಳಲು ಅವಕಾಶ ಇರುವುದಿಲಲ. ಹೊರಗಿನಿಂದ ಬರುವ ಟ್ರ್ಯಾಕ್ಟರ್/ಬಸ್ಸು/ಕಾರು/ಬೈಕ್/ಗೂಡ್ಸ್ ವಾಹನಗಳು ಜಾತ್ರಾ ಮಹೋತ್ಸವ ವೇಳೆಯಲ್ಲಿ ಗ್ರಾಮಕ್ಕೆ ಪ್ರವೇಶಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.
ಸ್ಥಳೀಯ ಭಕ್ತಾದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದು ಕಮಿಟಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post