ಹೊಳಲ್ಕೆರೆ: ತಾಲೂಕಿನ ಗುಂಡೇರಿ ಗ್ರಾಮದ ಜಮೀನೊಂದರಲ್ಲಿ ಚಿರತೆ ಸೋಮವಾರ ರಾತ್ರಿ ಸಾವಿಗೀಡಾದ ಘಟನೆ ತಡವಾಗಿ ಬೆಳಕಿಗೆ ಬಂದಿವೆ.
ಪರಸ್ಪರ ಚಿರತೆಗಳ ಕಾದಾಟದಲ್ಲಿ ಗಾಯಗೊಂಡು ಚಿರತೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿದರು.
ಮೃತ ಚಿರತೆ ದೇಹದ ತಲೆ, ಕಿವಿ ಭಾಗದಲ್ಲಿ ಗಾಯಗಳು ಪತ್ತೆಯಾಗಿವೆ. ಪಶು ವೈದ್ಯರಿಂದ ತಪಾಸಣೆ ನಡೆಸಲಾಯಿತು. ಗಾಯದ ಮಾದರಿ ದಾವಣಗೆರೆ ಪ್ರಯೋಗಾಲಯಕ್ಕೆ ರವಾನೆ ಮಾಡಿರುವುದಾಗಿ ಅರಣ್ಯ ಇಲಾಖೆಯವರು ತಿಳಿಸಿದ್ದಾರೆ.
ಹೊಳಲ್ಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Discussion about this post