ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಕಾಂಗ್ರೆಸ್ ಪಕ್ಷ ಆಧಿಕಾರದಲ್ಲಿ ಮುಂದುವರೆದಿದ್ದರೆ ಹಟ್ಟಿ ಚಿನ್ನದ ಗಣಿ ಅಭಿವೃದ್ಧಿ ಜೊತೆಗೆ ಇಂಗಳದಾಳ ಮತ್ತು ಕೋಲಾರ ಗಣಿಗಳನ್ನು ಪುನರ್ ಆರಂಭ ಮಾಡಲು ತಿರ್ಮನಿಸಲಾಗಿತ್ತು. ಆದರೆ ಸರ್ಕಾರ ಬದಲಾವಣೆಯಾಗಿದ್ದರಿಂದ ಈ ಪ್ರಸ್ತಾವನೆ ಕೈಬಿಡಬೇಕಾಯಿತು ಎಂದು ಶಾಸಕ ಹಾಗೂ ಹಟ್ಟಿ ಚಿನ್ನದ ಗಣಿ ಮಾಜಿ ಅಧ್ಯಕ್ಷ ಟಿ. ರಘುಮೂರ್ತಿ ಹೇಳಿದೆರು.
ನಗರದ ಶಾಸಕರ ಭವನದಲ್ಲಿ ಹಟ್ಟಿ ಚಿನ್ನದ ಗಣಿ ಅಧಿಕಾರಿಗಳು ಹಾಗೂ ಕಾರ್ಮಿಕರು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹಟ್ಟಿ ಚಿನ್ನದ ಗಣಿ ಕಂಪನಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ ಅಲ್ಲಿನ ನೌಕರರ ವೇತನ, ಸೇವಾ ಭದ್ರತೆ ಹಾಗೂ ಮೂಲಭೂತ ಸೌಕರ್ಯಗಳು ಒಳಗೊಂಡತೆ ಹಲವು ಸೌಲಭ್ಯಗಳನ್ನು ಅಲ್ಲಿನ ನೌಕರರಿಗೆ ಕಲ್ಪಿಸಿಕೊಡುವ ಪ್ರಯತ್ನವನ್ನು ಮಾಡಿದ್ದೆ. ಈ ಸಂಬಂಧ ಅಲ್ಲಿನ ನೌಕರರ ವೃಂದ ತಮ್ಮನ್ನು ಸನ್ಮಾನಿಸಿ ಅಭಿನಂದಿಸಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದರು.
ಜಿಲ್ಲೆಯ ನಿಷ್ಠಾವಂತ ಅಧಿಕಾರಿಗಳು ಹಾಗೂ ಕಾರ್ಮಿಕರ ಶ್ರೇಯೋಭಿವೃದ್ಧಿಯೇ ನನ್ನ ಮೊದಲ ಆದ್ಯತೆಯಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತಿರುವ ಎಲ್ಲರ ಏಳಿಗೆಗಾಗಿ ದುಡಿಯುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಭರವಸೆ ನೀಡಿದರು.
ಹಟ್ಟಿ ಚಿನ್ನದ ಗಣಿ ಅಧಿಕಾರಿ ಹಾಗೂ ಕಾರ್ಮಿಕ ಸಂಘದ ಅಧ್ಯಕ್ಷ ವೀರಭದ್ರಪ್ಪ, ಪ್ರಧಾನ ಕಾರ್ಯದರ್ಶಿ ಎಂ.ಡಿ. ಅಹಮದ್ ಆಲಿ ಮಾತನಾಡಿದರು
ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಟಿ.ರಮೇಶ, ತಾಲ್ಲೂಕು ಪಂಚಾಯಿತಿ ಸದಸ್ಯ ಗಿರಿಯಪ್ಪ, ನಗರಸಭೆ ಸದಸ್ಯರಾದ ವೈ. ಪ್ರಕಾಶ, ತಾಲ್ಲೂಕು ಪಂಚಾಯಿತಿ ಸದಸ್ಯ ಗಿರಿಯಪ್ಪ, ಹಟ್ಟಿ ಚಿನ್ನದ ಗಣಿ ಆಡಳಿತ ಮತ್ತು ಕಾರ್ಮಿಕ ಸಂಘದ ಕಾರ್ಯದರ್ಶಿಗಳಾದ ಗುಂಡಪ್ಪ ಬಂಡಾರಿ, ನಾಗೇಶರಾವ್, ಮುರುಳಿ ಚನ್ನಪ್ಪ ಗುತ್ತಿಗೆದಾರ್ ಸಂಘದ ಸದಸ್ಯರು ಮುಖಂಡರಾದ ಕೃಷ್ಣಾ ಇನ್ನಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post