ಕಲ್ಪ ಮೀಡಿಯಾ ಹೌಸ್
ಚಿತ್ರದುರ್ಗ: ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪೊಲೀಸ್ ಕಲ್ಯಾಣ ಮತ್ತು ಧ್ವಜ ದಿನಾಚರಣೆ ನಡೆಯಿತು.
ನಿವೃತ್ತ ಆರಕ್ಷಕ ಉಪ ನಿರೀಕ್ಷಕರಾದ ಎಸ್.ಆರ್. ಶಿವಮೂರ್ತಿ ಮಾತನಾಡಿ, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಒತ್ತಡ ಮುಕ್ತರನ್ನಾಗಿಸಬೇಕು. ಹಾಗೂ ಬಿಡುವಿನ ವೇಳೆಯಲ್ಲಿ ತಮ್ಮ ಕುಟುಂಬಕ್ಕಾಗಿ ಸಮಯ ಮೀಸಲಿಡಲು ಅವಕಾಶ ಮಾಡಿಕೊಡಬೇಕು ಎಂದರು.
ಎಸ್‌ಪಿ ಜಿ. ರಾಧಿಕಾ ಮಾತನಾಡಿ, ಪೊಲೀಸರ ಕಲ್ಯಾಣಕ್ಕಾಗಿ ಇಲಾಖೆ ಬದ್ಧವಾಗಿದೆ. ಪೊಲೀಸ್ ಧ್ವಜವನ್ನು ಮಾರಾಟ ಮಾಡಿ 11.70 ಲಕ್ಷ ರೂಪಾಯಿ ಸಂಗ್ರಹ ಮಾಡಲಾಗಿದೆ. ಇದರಲ್ಲಿ ಶೇ.50ರಷ್ಟು ಹಣವನ್ನು ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ದಿ ನಿಧಿಗೆ ಶೇ.25ರಷ್ಟು ಹಣವನ್ನು ಘಟಕ ಜಿಲ್ಲಾ ಪೊಲೀಸ್ ಕಲ್ಯಾಣ ನಿಧಿ, ಹಾಗೂ ಇನ್ನುಳಿದ ಹಣವನ್ನು ಕೇಂದ್ರ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ದಿ ನಿಧಿಗೆ ನೀಡಲಾಗುವುದು. 2020-21ನೇ ಸಾಲಿನಲ್ಲಿ ಐವರು ಮೃತಪಟ್ಟಿದ್ದು ತಲಾ 10 ಸಾವಿರ ರೂ. ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಕವಿತಾ ಮನ್ನಿಕೇರಿ, ಹೆಚ್ಚುವರಿ ರಕ್ಷಣಾಧಿಕಾರಿ ಮಹಾಲಿಂಗ ನಂದಗಾವಿ, ಪ್ರಾಂಶುಪಾಲ ಪಾಪಣ್ಣ ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news















