ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಶಿವಮೂರ್ತಿ ಮುರುಘಾ Muruga Shri ಶರಣರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಅವರನ್ನು ಜಿಲ್ಲಾಸ್ಪತ್ರೆಯ ಐಸಿಯು ಘಟಕಕ್ಕೆ ದಾಖಲಿಸಲಾಗಿದೆ.
ಶ್ರೀಗಳ ಪರ ವಕೀಲ ಉಮೇಶ್ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಸತತ ಎರಡು ಗಂಟೆಗಳಿಂದ ಶ್ರೀಗಳ ಆರೋಗ್ಯ ತಪಾಸಣೆ ನಡೆಯುತ್ತಿದ್ದು, ಉಸಿರಾಟದ ತೊಂದರೆ ಮತ್ತು ಎದೆನೋವಿನಿಂದ ಶ್ರೀಗಳು ಬಳಲುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಈ ಮಧ್ಯೆ ಶ್ರೀಗಳ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಜಾಮೀನು ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post