ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ವಿದ್ಯಾರ್ಥಿನಿಯರ ಮೇಲಿನ ಅತ್ಯಾಚಾರದ ಪೋಕ್ಸೋ ಪ್ರಕರಣದಲ್ಲಿ ಕಳೆದ 14 ತಿಂಗಳಿನಿಂದ ಜೈಲಿನಲ್ಲಿದ್ದ ಚಿತ್ರದುರ್ಗ ಮುರುಘಾ ಮಠದ ಶಿವ ಶರಣರು Muruga Mutt Shri ಜಾಮೀನಿನ ಮೇಲೆ ಇಂದು ಬಿಡುಗಡೆಯಾಗಿದ್ದಾರೆ.
ಒಂದು ಪ್ರಕರಣದಲ್ಲಿ ಈಗಾಗಲೇ ಜಾಮೀನು ದೊರೆತಿತ್ತು. ಬಾಡಿ ವಾರೆಂಟ್ ಇದ್ದ ಇನ್ನೊಂದು ಪ್ರಕರಣದಲ್ಲೂ ಸಹ ಜಾಮೀನು ದೊರೆತಿದ್ದು, ಇಂದು ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಇಂದು ಬೆಳಗ್ಗೆ ಮುರುಘಾ ಸ್ವಾಮೀಜಿ ಪರ ವಕೀಲರು ನ್ಯಾಯಾಧೀಶರ ಮುಂದೆ ಬಿಡುಗಡೆಗೆ ಮನವಿ ಸಲ್ಲಿಸಿದ್ದು, ಇದರ ಆಧಾರದಲ್ಲಿ ಬಿಡುಗಡೆ ಮಾಡಲಾಗಿದೆ.
Also read: ಮಕ್ಕಳು ಸಿಹಿತಿಂಡಿ ತಿಂದ ನಂತರ ಬ್ರಷ್ ಮಾಡಿಸಿ: ಡಾ. ವಿನಯ ಶ್ರೀನಿವಾಸ್ ಸಲಹೆ
ಮುರುಘಾ ಮಠಕ್ಕೆ ಹೋಗದಂತೆ ನ್ಯಾಯಾಲಯ ಷರತ್ತು ವಿಧಿಸಿರುವ ಹಿನ್ನೆಲೆಯಲ್ಲಿ ಜೈಲಿನಿಂದ ಬಿಡುಗಡೆಯಾದ ಶಿವಮೂರ್ತಿ ಶರಣರು ತಮ್ಮ ಬೆಂಬಲಿಗರ ಜೊತೆಯಲ್ಲಿ ದಾವಣಗೆರೆ ಕಡೆ ಹೊರಟಿದ್ದಾರೆ ಎಂದು ವರದಿಯಾಗಿದೆ.
ಏನೆಲ್ಲಾ ಷರತ್ತು ವಿಧಿಸಲಾಗಿದೆ?
ಜಾಮೀನು ಪಡೆಯುವ ಮೊದಲು ಇಬ್ಬರ ಶ್ಯೂರಿಟಿ ನೀಡಬೇಕು
2 ಲಕ್ಷ ರೂ. ಬೆಲೆಬಾಳುವ ಬೇಲ್ ಬಾಂಡ್ ನೀಡಬೇಕು
ನ್ಯಾಯಾಲಯ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಬೇಕು.
ಯಾವುದೇ ಕಾರಣಕ್ಕೂ ಸಾಕ್ಷ್ಯ ನಾಶ ಮಾಡುವಂತಿಲ್ಲ
ಚಿತ್ರದುರ್ಗದ ಮುರುಘಾ ಮಠಕ್ಕೆ ಹೋಗುವಂತಿಲ್ಲ
ಮುರುಘಾ ಮಠದ ಆಡಳಿತಾಧಿಕಾರಿ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವಂತಿಲ್ಲ
ವಿದೇಶಕ್ಕೆ ಹೋಗುವಂತಿಲ್ಲ, ಪಾಸ್ ಪೋರ್ಟ್ ಸರೆಂಡರ್ ಮಾಡಬೇಕು
ಇದೇ ರೀತಿ ಅಪರಾಧವಾದ ಎಸಗುವಂತಿಲ್ಲ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post