ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕಳ ನೀಡಿದ ಆರೋಪದಲ್ಲಿ ಒಂದು ವರ್ಷ ಜೈಲಿನಲ್ಲಿದ್ದು ನಾಲ್ಕು ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ಹೊರ ಬಂದಿದ್ದ ಮುರುಘಾ ಮಠದ ಶಿವಮೂರ್ತಿ Shivamurthy Shri of Murugha Mutt ಶರಣರ ಅವರ ವಿರುದ್ಧ ಮತ್ತೊಮ್ಮೆ ಅರೆಸ್ಟ್ ವಾರೆಂಟ್ ಜಾರಿಯಾಗಿದೆ.
ಹೌದು…2ನೆಯ ಪೋಕ್ಸೋ ಪ್ರಕರಣದಲ್ಲಿ ಶಿವಮೂರ್ತಿ ವಿರುದ್ಧ ಚಿತ್ರದುರ್ಗದ 2ನೆಯ ಅಪರ ಜಿಲ್ಲಾ ಸತ್ರ ನ್ಯಾಯಾಲಯ ಬಂಧನ ವಾರೆಂಟ್ ಜಾರಿ ಮಾಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಿ ಶಿವಮೂರ್ತಿ ಶರಣರನ್ನು ಬಂಧಿಸುವ ಸಾಧ್ಯತೆಯಿದೆ.
1ನೆಯ ಪೊಕ್ಸೋ ಪ್ರಕರಣದಲ್ಲಿ ಹೈಕೋರ್ಟ್’ನಿಂದ ಜಾಮೀನು ಪಡೆದ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿತ್ತು. ಆದರೆ, ನಾಲ್ಕು ದಿನಗಳಲ್ಲೇ ಮತ್ತೆ ಬಂಧನದ ಭೀತಿ ಎದುರಾಗಿದೆ.
Also read: ನ.28 ರಂದು ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post