ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ/ಮೈಸೂರು |
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಈಗಾಗಲೇ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಶಿವಮೂರ್ತಿ ಸ್ವಾಮೀಜ ವಿರುದ್ಧ ಮತ್ತೊಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಈ ಕುರಿತಂತೆ ಮೈಸೂರಿನ ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಮಠದಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ನಿನ್ನೆ ನಮ್ಮ ಬಳಿ ಬಂದು ತಮ್ಮ ವಿರುದ್ಧ ಸ್ವಾಮೀಜಿ ನಡೆಸಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿದ್ದಾರೆ. ಈ ಪ್ರಕರಣವೂ ಸಹ ಮೊದಲನೆಯ ಪ್ರಕರಣದಂತೆಯೇ ಇದೆ. ಹೀಗಾಗಿ ನಜರಾಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಪೋಕ್ಸೋ ಕಾಯ್ದೆಯಡಿ ಮತ್ತೊಂದು ಪ್ರಕರಣ ದಾಖಲಾಗಿದ್ದು, ಇದನ್ನು ಚಿತ್ರದುರ್ಗ ಠಾಣೆಗೆ ವರ್ಗಾಯಿಸಲಾಗುತ್ತದೆ ಎಂದಿದ್ದಾರೆ.
ಇನ್ನು ಮುರುಘಾ ಶ್ರೀ Murugha Shri ವಿರುದ್ಧ ಇನ್ನೊಂದು ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿರುವ ಮುರುಘಾ ಮಠಕ್ಕೆ ಬಿಗಿ ಪೊಲೀಸ್ ಬಂದೊಬಸ್ತ್ ಕಲ್ಪಿಸಲಾಗಿದೆ. ಅಲ್ಲದೆ ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
Also read: 10 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕತ್ತು ಹಿಸುಕಿ ಭೀಕರವಾಗಿ ಕೊಂದ ನೀಚ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post