ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿರಾ: ರಾಜ್ಯ ಆರ್ಯವೈಶ್ಯ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಅವರು ಕಾರು ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಅರುಣ್ ಅವರು ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಶಿರಾ ಬಳಿ ಹೆದ್ದಾರಿಯಲ್ಲಿ ಬೈಕ್ ಅಡ್ಡ ಬಂದ ಪರಿಣಾಮ ಕಾರು ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಅರುಣ್ ಅವರ ಜೊತೆ ಕಾರಿನಲ್ಲಿ ಜಿಲ್ಲಾ ಪಂಚಾಯ್ತಿ ಸದಸ್ಯ ತಮ್ಮಡಿಹಳ್ಳಿ ನಾಗರಾಜ್, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ವಾಸುದೇವ್, ಎಪಿಎಂಸಿ ಶಂಕರಪ್ಪ ಇದ್ದರು. ಅದೃಷ್ಟವಶಾತ್ ಯಾರಿಗೂ ಯಾವುದೇ ರೀತಿಯ ಅಪಾಯವಾಗಿಲ್ಲ.
ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ಡಿ.ಎಸ್. ಅರುಣ್, ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಶಿರಾದ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿತು. ಆದರೆ, ದೇವರ ದಯೆಯಿಂದ ಯಾರಿಗೂ ಯಾವುದೇ ರೀತಿಯಲ್ಲಿ ತೊಂದರೆಯಾಗಲಿಲ್ಲ. ದೇವರ ಹಾಗೂ ಜನರ ಆರ್ಶೀವಾದದಿಂದ ಸುರಕ್ಷಿತವಾಗಿದ್ದು, ಯಾರೂ ಸಹ ಆತಂಕಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಬದಲಿ ಕಾರಿನಲ್ಲಿ ಬೆಂಗಳೂರಿಗೆ ಅರುಣ್ ಪ್ರಯಾಣ ಬೆಳೆಸಿದರು.
Get In Touch With Us info@kalpa.news Whatsapp: 9481252093







Discussion about this post