ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಅಕ್ರಮವಾಗಿ ಕಾನೂನು ಬಾಹಿರವಾಗಿ ಇಸ್ಪೀಟು ದಂಧೆಯಲ್ಲಿ ತೊಡಗಿದ್ದ 20 ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ ಎರಡು ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ ಪಡೆದಿದ್ದಾರೆ.
ತಾಲೂಕಿನ ಪರಶುರಾಂಪು ಹೋಬಳಿಯ ದಾಸರ್ಲಹಳ್ಳಿಯ ಅರಣ್ಯ ಪ್ರದೇಶದಲ್ಲಿ ಇಸ್ಪೀಟು ದಂಧೆ ನಡೆಯುತ್ತಿರುವ ಖಚಿತ ಮಾಹಿತಿ ಪೊಲೀಸರಿಗೆ ದೊರೆತಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಜಿ. ರಾಧಿಕ ಅವರ ಮಾರ್ಗದರ್ಶನದಲ್ಲಿ ಪರುಶುರಾಂಪುರ ಪಿಎಸ್’ಐ ಕೆ.ಎನ್. ಚಂದ್ರಶೇಖರ್ ನೇತೃತ್ವದ ತಂಡವನ್ನು ರಚಿಸಲಾಗಿತ್ತು.
ಈ ಅಧಿಕಾರಿಗಳ ತಂಡ ದಾಳಿ ನಡೆಸಿದ ವೇಳೆ 20 ಆರೋಪಿಗಳನ್ನು ಬಂಧಿಸಿ 2.25 ಲಕ್ಷ ರೂ. ಹಣ, 13 ದ್ವಿಚಕ್ರ ವಾಹನ, 8 ಮೊಬೈಲ್, 1 ತಾಡಪಾಲನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳು ದಾಸರ್ಲಹಳ್ಳಿಯ ಅರಣ್ಯ ಪ್ರದೇಶದಲ್ಲಿ ಕರ್ನಾಟಕ ಮತ್ತು ಆಂಧ್ರ ಗಡಿಭಾಗದಲ್ಲಿ ಹಣವನ್ನು ಪಣವನ್ನಾಗಿ ಇಟ್ಟುಕೊಂಡು ಅಕ್ರಮವಾಗಿ ಇಸ್ಪೀಟು ದಂಧೆ ನಡೆಸುತ್ತಿದ್ದರು.
ಈ ದಾಳಿಯಲ್ಲಿ ಪರಶುರಾಂಪುರ ಪೊಲೀಸ್ ಸಿಬ್ಬಂದಿ ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post