ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸಾವನ್ನಪ್ಪಿರುವ ಘಟನೆ ಇಂದು ಬೆಳಗಿನ ಜಾವ ನಡೆದಿದೆ.
ಚಳ್ಳಕೆರೆ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದ್ದು, ಮೃತ ಚಾಲಕನನ್ನು ತಮಿಳುನಾಡು ಮೂಲದ ಮುರುಗನ್ ಎಂದು ಗುರುತಿಸಲಾಗಿದೆ.

ಮುರುಗನ್ ಅವರು, ನಿಲ್ಲಿಸಿದ್ದ ಲಾರಿಯಲ್ಲಿ ನಿದ್ರಿಸುತ್ತಿದ್ದರು. ಮತ್ತೊಂದು ಲಾರಿಗೆ ಇನ್ನೊಂದು ಲಾರಿ ಹಿಂಬದಿಯಿಂದ ವೇಗವಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಲಾರಿಯಲ್ಲಿ ನಿದ್ರಿಸುತ್ತಿದ್ದ ಮುರುಗನ್ ಅವರು ಹೃದಯಾಘಾತದಿಂದ ಸಾವನ್ನಪ್ಪಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ.
ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















