ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಮಹಿಳೆಯೊಬ್ಬರನ್ನು ಅಪಹರಣ ಮಾಡಲು ಯತ್ನಿಸಿದ ಯುವಕನನ್ನು ಸಾರ್ವಜನಿಕರು ಕಂಬಕ್ಕೆ ಕಟ್ಟಿ, ಥಳಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಚಳ್ಳಕೆರೆ ತಾಲೂಕಿನ ರಾಮಜೋಗಿ ಹಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸ ಮುಚ್ಚುಗುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರತಾಪ್ ಎನ್ನುವ ಯುವಕ ಮಹಿಳೆಯೊಬ್ಬಳನ್ನು ಆಕೆಯ ಮದುವೆಗೂ ಮುನ್ನ ಅವಳನ್ನು ಪ್ರೀತಿಸುತ್ತಿದ್ದ ಎಂದು ತಿಳಿದು ಬಂದಿದೆ.
ಈತ ಹಿಂದೆ ಎರಡು ಬಾರಿ ಅಪಹರಣ ಮಾಡಲು ಯತ್ನಿಸಿದ್ದ ಎನ್ನಲಾಗಿದ್ದು, ಆಗ ವಿಫಲವಾದ ಕಾರಣದಿಂದ ಗುರುವಾರ ಇದೇ ಕಾರಣಕ್ಕೆ ಮನೆಗೆ ನುಗ್ಗಿ ಅವಳನ್ನು ಅಪಹರಣ ಮಾಡಲು ಅವನು ಸ್ನೇಹಿತರ ಜೊತೆಗೆ ಬಂದಿದ್ದ ಎಂದು ಹೇಳಲಾಗುತ್ತಿದೆ. ಹೀಗೆ ಬಂದ ಯುವಕ ಪ್ರತಾಪ್ ಹಾಗೂ ಅವನ ಸ್ನೇಹಿತನನ್ನು ಮನೆಯವರು ಹಾಗೂ ಗ್ರಾಮಸ್ಥರು ಕಂಬಕ್ಕೆ ಕಟ್ಟಿ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಇದರ ಫೋಟೋ ಹಾಗೂ ವೀಡಿಯೋ ಈಗ ವೈರಲ್ ಆಗಿದೆ.
ಈ ಕುರಿತಂತೆ ಮಾತನಾಡಿರುವ ಡಿವೈಎಸ್’ಪಿ ಕೆ.ವಿ. ಶ್ರೀಧರ್, ಚಿಕ್ಕಮ್ಮನಹಳ್ಳಿಯ ಪ್ರತಾಪ್ ಹಾಗೂ ಮೂವರ ಮೇಲೆ ಮಹಿಳೆಯ ಸಂಬಂಧಿ ಯಶೋಧಮ್ಮ ಚಳ್ಳಕೆರೆ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಅಪಹರಣಕ್ಕೆ ಯತ್ನಿಸಿದ್ದ ಮೂವರನ್ನು ಕರೆ ತಂದು ಪೋಲಿಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post