ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಪೋಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎಚ್. ಮಲ್ಲಿಕಾರ್ಜುನಪ್ಪ (40)ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲು ಹೋಗುವಾಗ ಮಾರ್ಗ ಮಧ್ಯದಲ್ಲಿ ಕುಸಿದ ಕಾರಣ ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆ ಸಾಗಿಸಿದ್ದು ಈ ವೇಳೆಗೆ ಅವರು ಕೊನೆಯುಸಿರೆಳೆದಿದ್ದರು.

ಮೃತ ಮುಖ್ಯಪೇದೆ ಹಲವು ದಿನಗಳಿಂದ ಕಾಮಾಲೆ ರೋಗದಿಂದ ಬಳಲುತ್ತಿದ್ದರು ಎಂದು ಮಾಹಿತಿ ತಿಳಿದುಬಂದಿದೆ.
ಮಲ್ಲಿಕಾರ್ಜುನ ಅವರು ಗ್ರಾಮವಾದ ಚಿತ್ರದುರ್ಗ ಜಿಲ್ಲೆಯ ತುರವನೂರು ಗ್ರಾಮದಲ್ಲಿ ಇಂದು ಸರ್ಕಾರ ವಿಧಿವಿಧಾನದ ಮೂಲಕ ಶ್ರದ್ದಾಂಜಲಿ ಸಲ್ಲಿಸಲಾಗುತ್ತದೆ ಎಂದು ಎಸ್’ಪಿ ಜಿ. ರಾಧಿಕಾ ಮಾಹಿತಿ ನೀಡಿದ್ದಾರೆ.

ಮೃತ ಮಲ್ಲಿಕಾರ್ಜುನಪ್ಪ ಅವರು ಪತ್ನಿ ಹಾಗೂ ಒಂದು ಗಂಡು ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















