ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಚಾಲಕರಿಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ನಡೆದಿದೆ.
ಜಿಲ್ಲೆಯ ಹಿರಿಯೂರು ತಾಲೂಕಿನ ಹಾಲುಮಾದೇನಹಳ್ಳಿ ಗೇಟ್ ಬಳಿಯಲ್ಲಿ ಇಂದು ಬೆಳಗಿನ ಜಾವ ಘಟನೆ ನಡೆದಿದ್ದು, ಅಪಘಾತದ ರಭಸಕ್ಕೆ ಎರಡೂ ಲಾರಿಗಳ ಚಾಲಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಹುಳಿಯಾರಿನಿಂದ ಬರುತ್ತಿದ್ದ ಲಾರಿ ತಮಿಳುನಾಡಿನ ಮೂಲದ ಹಾಗೂ ಹಿರಿಯೂರು ಕಡೆಯಿಂದ ಹೋಗುತ್ತಿದ್ದ ಲಾರಿಗಳ ನಡುವೆ ಪರಸ್ಪರ ಡಿಕ್ಕಿ ಹೊಡೆದು ಇಬ್ಬರು ಚಾಲಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಆದರೆ ಅವರ ಹೆಸರುಗಳು ಪತ್ತೆಯಾಗಿಲ್ಲ. ಹಿರಿಯೂರು ಗ್ರಾಮಾಂತರ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಘಟನೆಯನ್ನು ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಿತ್ರದುರ್ಗ)










Discussion about this post