ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ತಾಲೂಕು ಪಂಚಾಯಿತಿಗೆ ಅನುದಾನ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಜಿಪಂ ಸಿಇಒ ನಂದಿನಿ ಹಾಗೂ ಶಾಸಕಿ ಪೂರ್ಣಿಮಾ ವಿರುದ್ಧ ಹಿರಿಯೂರು ತಾಲೂಕು ಪಂಚಾಯತಿ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು.
ತಾಲೂಕು ಪಂಚಾಯತಿ ಆವರಣದಲ್ಲಿ ಜಮಾಯಿಸಿದ ಸದಸ್ಯರು ತಾ.ಪಂ ಅಧಿಕಾರಿಗಳನ್ನು ಕಚೇರಿಯಿಂದ ಹೊರಕಳುಹಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಾಗೂ ಕಾಂಗ್ರೆಸ್, ಜೆಡಿಎಸ್ ತಾಪಂ ಸದಸ್ಯರ ನಡುವೆ ವಾಗ್ವಾದ ನಡೆಯಿತು.
ಸಿಇಒ ಅವರು ಅನುದಾನ ತಡೆಹಿಡಿಯಲು ಶಾಸಕಿ ಪೂರ್ಣಿಮಾ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಕಚೇರಿ ಒಳಕ್ಕೆ ಹೋಗಲಾರದೆ ಅಧಿಕಾರಿಗಳು ಹೊರಗೆ ನಡೆದರು.
(ವರದಿ: ಸುರೇಶ್ ಬೆಳಗೆರೆ, ಚಿತ್ರದುರ್ಗ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post