ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಹೊಳೆಲ್ಕೆರೆ ತಾಲೂಕಿನಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀರಕ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಏಳು ಜನರ ಸ್ಥಿತಿ ಗಂಭೀರವಾಗಿದೆ.
ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹಳೆಹಳ್ಳಿ ಬಳಿ ಬುಧವಾರ ಭೀಕರ ಅಪಘಾತ ಸಂಭವಿಸಿದೆ. ಹೊಳಲ್ಕೆರೆ ಕಡೆಯಿಂದ ಬರುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ ಮತ್ತು ಅಜಾಗರೂಕತೆಯಿಂದ ಎರಡು ಕಾರುಗಳು ಡಿಕ್ಕಿ ಹೊಡೆದಿವೆ.
ಈ ವೇಳೆ ಕಾರಿನಲ್ಲಿದ್ದ ಓರ್ವ ಮೃತಪಟ್ಟಿದ್ದು ಏಳು ಜನರು ಗಂಭೀರ ಗಾಯಗೊಂಡಿದ್ದು ಏಳು ಜನರನ್ನು ಸರ್ಕಾರಿ ಆಸ್ಪತೆಗೆ ಸೇರಿಸಲಾಗಿದೆ.
ಮೃತನನ್ನು ಲಕ್ಕವಳ್ಳಿ ಮೂಲದ ಶಂಭಪ್ಪ (48) ಎಂದು ಗುರುತಿಸಲಾಗಿದೆ.
ಗಾಯಗೊಂಡವರಲ್ಲಿ ಇಬ್ಬರು ಮಕ್ಕಳಿದ್ದು, ಹೊಳಲ್ಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಳಲ್ಕೆರೆ ಸಿಪಿಐ ರವೀಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
(ವರದಿ: ಸುರೇಶ್ ಬೆಳಗೆರೆ, ಚಿತ್ರದುರ್ಗ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post