ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಅಂತರ್ಜಾತಿ ವಿವಾಹ ಪ್ರೋತ್ಸಾಹ ಧನ ನೀಡಲು ಲಂಚ ಪಡೆಯುತ್ತಿದ್ದ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ.
ಭ್ರಷ್ಟಾಚಾರದ ನಿಗ್ರಹ ದಳದ ಡಿವೈಎಸ್ ಪಿ. ಬಸವರಾಜ್ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಜಿಲ್ಲೆಯ ಹೊಸದುರ್ಗ ಪಟ್ಟಣದ ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ಶ್ರೀನಿವಾಸ ಎಂಬ ಅಧಿಕಾರಿ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದು, ವಿವಾಹ ಪ್ರೋತ್ಸಾಹ ಧನ ನೀಡಲು ಶಿವಪ್ಪ ಎಂಬುವವರಿಂದ 10 ಸಾವಿರ ಹಣ ಪಡೆಯುತ್ತಿದ್ದರು ಎಂಬ ಆರೋಪದ ಮೇಲೆ ದಾಳಿ ನಡೆಸಲಾಗಿದೆ. ಶಿವಪ್ಪ ಎಂಬುವರು ಅಧಿಕಾರಿ ವಿರುದ್ಧ ನೀಡಿದ ದೂರಿನ ಅನ್ವಯ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಂಚ ಸ್ವೀಕಾರ ಆರೋಪದ ಮೇಲೆ ಅಧಿಕಾರಿಯನ್ನ ವಶಕ್ಕೆ ಪಡೆದಿದ್ದಾರೆ.
ದಾಳಿ ವೇಳೆ ಎಸಿ ಅಧಿಕಾರಿ ಪ್ರವಿಣ್ ಕುಮಾರ್ ಸಿಬ್ಬಂದಿಗಳಾದ ಹರೀಶ, ಯತೇಂದ್ರ ಇದ್ದರು.
(ವರದಿ: ಸುರೇಶ್ ಬೆಳಗೆರೆ, ಚಿತ್ರದುರ್ಗ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post