ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಸರಣಿ ಅಪಘಾತವಾದ ಹಿನ್ನೆಲೆ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂಳಿದ ಮೂವರು ಗಂಭೀರವಾಗಿ ಗಾಯಗೊಂಡಿರವ ಘಟನೆ ರಾಷ್ಡೀಯ ಹೆದ್ದಾರಿ ಹಿರಿಯೂರು ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ನಡೆದಿದೆ.
ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರುಗಳು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತ ಪಟ್ಟಿದ್ದಾರೆ. ಮೃತ ವ್ಯಕ್ತಿಯ ವಿಳಾಸ ತಿಳಿದು ಬಂದಿಲ್ಲಾ. ಪೊಲೀಸರು ಪತ್ತೆ ಹಚ್ಚುತ್ತಿದ್ದಾರೆ.
ಇನ್ನು ಗಾಯಾಳುಗಳನ್ನು ಹಿರಿಯೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಘಟನಾ ಸ್ಥಳಕ್ಕೆ ಡಿವೈಎಸ್ಪಿ ರೋಷನ್ ಜಮೀರ್ ಹಾಗೂ ಸಿಪಿಐ ರಾಗವೇಂದ್ರ ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ವರದಿ: ಸುರೇಶ್ ಬೆಳಗೆರೆ, ಚಿತ್ರದುರ್ಗ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post