ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಕೃಷಿ ಸಚಿವ ಬಿ. ಸಿ. ಪಾಟೀಲ್ Minister B C Patil ಗದಗ, ಚಿತ್ರದುರ್ಗ ಪ್ರವಾಸ ಕೈಗೊಂಡಿದ್ದು, ಮೇ.14ರ ಶನಿವಾರ ಲಕ್ಕವಳ್ಳಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಮೇ 15ರ ಭಾನುವಾರ ಬೆಳಿಗ್ಗೆ 9ಕ್ಕೆ ಲಿಂಗದಹಳ್ಳಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಕೋಲ್ಡ್ ಸ್ಟೋರೇಜ್ ಉದ್ಘಾಟನಾ ಕಾರ್ಯಕ್ರಮ ಜರುಗಲಿದೆ. 10ಗಂಟೆಗೆ ತರೀಕೆರೆ, ನೇರಲಕೆರೆ, ನೂತನ ಪ್ರಾಥಮಿಕ ಆರೋಗ್ಯ ಕೇಂದ್ರ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
10:30ಕ್ಕೆ ಅಜ್ಜಂಪುರ ತಾಲೂಕು ಗೊಂಡೇದಹಳ್ಳಿ ಗೋ.ರು.ಚ ಗ್ರಾಮ ವಿಕಾಸ ಪ್ರತಿಷ್ಠಾನ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 11:30ಕ್ಕೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಿರೇಕೆರೂರಿಗೆ ರಸ್ತೆ ಮೂಲಕ ಪ್ರಯಾಣ ಬೆಳೆಸಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.
Also read: ಮತದಾರರ ಪಟ್ಟಿಯೊಂದಿಗೆ ಆಧಾರ್ ಲಿಂಕ್ ನಿಯಮ ಶೀಘ್ರದಲ್ಲೇ ಜಾರಿ ಸಾಧ್ಯತೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post