ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಅತಿ ಹೆಚ್ಚು ಅಭ್ಯರ್ಥಿಗಳು ವಿಜಯ ಸಾಧಿಸಿದ್ದು, ಅದರಂತೆ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯತಿಯಲ್ಲೂ ಗೆಲುವು ಸಾಧಿಸಲು ಶ್ರಮ ವಹಿಸಬೇಕು ಎಂದು ಸಂಸದ ಎ. ನಾರಾಯಣಸ್ವಾಮಿ ಕಾರ್ಯಕರ್ತರಿಗೆ ಕರೆ ನಿಡಿದ್ದಾರೆ.
ನಗರದ ವಾಲ್ಮೀಕಿ ಕಲ್ಯಾಣ ಮಂಟಪದಲ್ಲಿ ನಡೆದ ಬಿಜೆಪಿ ಜಿಲ್ಲಾ ಎರಡನೇ ಕಾರ್ಯಕಾರಿಣಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ಕಾರ್ಯಗಳನ್ನು ಮಾಡುತ್ತ ದೇಶವನ್ನು ಅಭಿವೃದ್ಧಿ ಪತ್ತದತ್ತ ಮುನ್ನಡೆಸುತ್ತಿದ್ದಾರೆ. ಇದನ್ನ ಅರಿತಿರುವ ಜನರು ಬಿಜೆಪಿಯತ್ತ ಒಲವು ತೋರುತ್ತಿದ್ದಾರೆ ಎಂದು ಹೇಳಿದರು.
ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳು ಬರುತ್ತಿರುವುದರಿಂದ ಬಿಜೆಪಿ ಸರ್ಕಾರ ಮಾಡುತ್ತಿರುವ ಸಾಧನೆಯನ್ನು ಜನರಿಗೆ ತಲುಪಿಸಿ ಅತಿ ಹೆಚ್ಚು ಸ್ಥಾನ ಗೆಲ್ಲಿಸುವಂತೆ ಕಾರ್ಯನಿರ್ವಹಿಸಬೇಕು ಎಂದರು.
ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಮಾತನಾಡಿ, ಚಿತ್ರದುರ್ಗ ಜಿಲ್ಲೆ ಬಿಜೆಪಿ ಪಕ್ಷದ ಭದ್ರಕೋಟೆಯಾಗಿ ಹೊರಹೊಮ್ಮಿದ್ದು, ಚಳ್ಳಕೆರೆ ಹೊರತುಪಡಿಸಿ ಉಳಿದ 5 ತಾಲೂಕುಗಳಲ್ಲಿ ಬಿಜೆಪಿ ಶಾಸಕರಿದ್ದು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಆರೂ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರು ಆಯ್ಕೆಯಾಗುವಂತೆ ಪ್ರಯತ್ನ ಮಾಡಬೇಕು ಎಂದು ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯದರ್ಶಿ ಕೆ.ಎಸ್. ನವೀನ್, ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜು ಗೌಡ್ರು, ವಿಭಾಗ ಸಂಘಟನಾ ಕಾರ್ಯದರ್ಶಿ ಜೇಷ್ಠ ಪಡಿವಾಳ್, ವಿಭಾಗದ ಪ್ರಭಾರಿ ಜಿಎಂ. ಸುರೇಶ್, ಹೊಸದುರ್ಗ ಶಾಸಕ ಗೂಳಿಹಟ್ಟಿ ಶೇಖರ್, ಜಿಲ್ಲಾ ಪ್ರಭಾರಿ ಶಂಕರಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ ರಾಜೇಶ್ ಬುರುಡೆಕಟ್ಟೆ, ಜಿ.ಟಿ. ಸುರೇಶ್, ಮಾಜಿ ಶಾಸಕ ರಮೇಶ್ ಚಳ್ಳಕೆರೆ, ಮಂಡಲ ಅಧ್ಯಕ್ಷ ಸುರನಹಳ್ಳಿ ಶ್ರೀನಿವಾಸ್ ಹಾಗೂ ಜಿಲ್ಲೆಯ ಪದಾಧಿಕಾರಿಗಳು, ಜಿಲ್ಲೆಯ ಕಾರ್ಯಕಾರಿಣಿ ಸದಸ್ಯರು, ವಿಶೇಷ ಆಹ್ವಾನಿತರು, ಜಿಲ್ಲೆಯ ಮೋರ್ಚಾ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಮಂಡಲದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ಮತ್ತು ಪ್ರಕೋಷ್ಠ ಜಿಲ್ಲಾ ಸಂಚಾಲಕರು ಮತ್ತು ಸಹ ಸಂಚಾಲಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post