ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ನಿವೃತ್ತ ಐಎಎಸ್ ಅಧಿಕಾರಿ ಪಿಎಸ್ ವಸ್ತ್ರದ್ P S Vasthrad ಅವರನ್ನು ಮುರುಘಾಮಠದ ಆಡಳಿತಾಧಿಕಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರದ ಉಪ ಕಾರ್ಯದರ್ಶಿ ಟಿ.ಸಿ. ಕಾಂತರಾಜ್ ಅವರು ಇಂದು ಆದೇಶ ಹೊರಡಿಸಿದ್ದಾರೆ.
ಮಠದ ಲೆಕ್ಕಪತ್ರ ನಿರ್ವಹಣೆ, ಮಠದ ಚರ ಸ್ಥಿರಾಸ್ತಿ ಉಸ್ತುವಾರಿ ನೋಡಿಕೊಳ್ಳುವ ಹಿತದೃಷ್ಟಿಯಿಂದ ಆಡಳಿತಾಧಿಕಾರಿ ನೇಮಿಸಲಾಗಿದ್ದು, ವಸ್ತ್ರದ್ ಅವರು ಮುರುಘಾಮಠದ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಶಿವಮೂರ್ತಿ ಮುರುಘಾ ಶರಣರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದ್ದು, ಅವರು ನ್ಯಾಯಾಂಗ ಬಂಧನದಲ್ಲಿರುವ ಹಿನ್ನೆಲೆಯಲ್ಲಿ ಟ್ರಸ್ಟ್ ಮತ್ತು ಶಿಕ್ಷಣ ಸಂಸ್ಥೆಗಳ ನಿರ್ವಹಣೆ ಆಡಳಿತಾಧಿಕಾರಿ ನೇಮಕ ಮಾಡುವಂತೆ ಭಕ್ತರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದರು.
Also read: ಗ್ರಾಮೀಣ ಕ್ರೀಡಾಕೂಟಗಳು ಸ್ಥಳೀಯ ಪ್ರತಿಭೆಗಳಿಗೆ ಉತ್ತಮ ವೇದಿಕೆ: ಗ್ರಾಪಂ ಅಧ್ಯಕ್ಷ ವಜ್ರ ಕುಮಾರ್
ಕೊನೆಗೂ ರಾಜ್ಯ ಸರ್ಕಾರ ಚಿತ್ರದುರ್ಗದ ಮುರುಘಾಮಠಕ್ಕೆ ಆಡಳಿತಾಧಿಕಾರಿಯನ್ನು ನೇಮಕ ಮಾಡಿ ಮಂಗಳವಾರ ಆದೇಶ ಹೊರಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post