ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಟೆಂಪೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ಚಳ್ಳಕೆರೆ – ಪರಶುರಾಂಪುರ ಹೆದ್ದಾರಿಯಲ್ಲಿ ಇಂದು ಮುಂಜಾನೆ ಸಂಭವಿಸಿದೆ.
ಮೆಕ್ಕೆಜೋಳ ತುಂಬಿಕೊಂಡು ಚಳ್ಳಕೆರೆಗೆ ಹೊರಟಿದ್ದ ಟೆಂಪೋಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಟೆಂಪೋ ಚಾಲಕ ಸೂರನಹಳ್ಳಿ ಗ್ರಾಮದ ಚಾಲಕ ತಿಮ್ಮಣ್ಣ ಅವರು ಕಾಲು ಮುರಿತಕ್ಕೊಳಗಾಗಿದ್ದು, ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಕಾರಣನಾದ ಬುಲೆರೋ ವಾಹನ ಚಾಲಕ ವಾಹನ ಬಿಟ್ಟು ಅಲ್ಲಿಂದ ಪರಾರಿಯಾಗಿದ್ದು, ಪೊಲೀಸರು ಕೇಸು ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
Also read: ಶಿವಮೊಗ್ಗ | ಬೃಹತ್ ಸ್ವದೇಶಿ ಮೇಳದ ವೇದಿಕೆ, ಮಳಿಗೆ ನಿರ್ಮಾಣಕ್ಕೆ ಗುದ್ದಲಿ ಪೂಜೆ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















