ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಚಿತ್ರದುರ್ಗದ ಪ್ರವಾಸಿ ಮಂದಿರ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದಾರೆ.
ಚಳ್ಳಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದ ಕಾರು ಚಾಲಕ ಮನು (21), ಚಿತ್ರದುರ್ಗ ತಾಲೂಕಿನ ಮೆದೇಹಳ್ಳಿ ಗ್ರಾಮದ ಹರೀಶ್ (25) ಮತ್ತು ಸಚಿನ್ (25)ಮೃತಪಟ್ಟವರಾಗಿದ್ದು, ಇಂಡಿಕಾ ಕಾರಿನಲ್ಲಿ ಡ್ರೈವರ್ ಸೇರಿ ಐವರು ಪ್ರಯಾಣಿಸುತ್ತಿದ್ದರು. ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಡಿವೈಡರ್ಗೆ ಡಿಕ್ಕಿಯಾಗಿದೆ.
ಈ ಸಂಬಂಧ ಚಿತ್ರದುರ್ಗ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















