ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ವೇಗವಾಗಿ ಬಂದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಇಬ್ಬರು ಬಾಲಕರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಯಾದಗಿರಿ ಜಿಲ್ಲೆಯವರಾದ ಕುಟುಂಬ ಬೆಂಗಳೂರಿನಿಂದ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಮಂಗಳವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 150Aನಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎನ್ನಲಾಗಿದೆ.
Also read: ಚಿಕ್ಕಮಗಳೂರು | ಮೂವರ ಹತ್ಯೆಗೈದು ವ್ಯಕ್ತಿ ಆತ್ಮಹತ್ಯೆ
ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದಿದ್ದು, 10 ಬಾರಿ ಪಲ್ಟಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಚಾಲಕ ಮೌಲಾ ಅಬ್ದುಲ್ (35) ಹಾಗೂ ಆತನ ಇಬ್ಬರು ಪುತ್ರರು ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.




















