ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಜಿಲ್ಲೆಯ ಹಿರಿಯೂರು ತಾಲೂಕಿನ ಆಲೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಟೈರ್ ಸ್ಫೋಟಗೊಂಡ ಪರಿಣಾಮ ಲಾರಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಗದಗ ಮೂಲದ ಹನುಮಪ್ಪ (30), ಪ್ರಶಾಂತ (28), ಗುರಪ್ಪ (30), ರಮೇಶ (30) ಈ ಭೀಕರ ಅಪಘಾತದಲ್ಲಿ ಮೃತಪಟ್ಟವರಾಗಿದ್ದು, ಗದಗ ಜಿಲ್ಲೆ ಹುಯಿಲಗೋಳದಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ರಾಷ್ಟ್ರೀಯ ಹೆದ್ದಾರಿ ೪ರಲ್ಲಿ ಟೈರ್ ಸ್ಫೋಟಗೊಂಡ ಕಾರಣ ಪಲ್ಟಿಯಾಗಿ ಸಾವನ್ನಪ್ಪಿದ್ದಾರೆ.

ಲಾರಿ ಪಲ್ಟಿಯಾಗಿದ್ದರಿಂದ ಹಿಂಬದಿಯಿಂದ ಬರುತ್ತಿದ್ದ ಕಾರು, ಆರು ಲಾರಿ ಡಿಕ್ಕಿ ಹೊಡೆದು ಸರಣಿ ಅಪಘಾತವಾಗಿ ೧೦ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿರಿಯೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















