ಕಲ್ಪ ಮೀಡಿಯಾ ಹೌಸ್ | ಚಿತ್ರದುರ್ಗ |
ಬಿಜೆಪಿಯಲ್ಲಿ ಭಿನ್ನಮತವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ತಿಳಿಸಿದರು.
ಅವರು ಇಂದು ಮುರುಘಾ ಮಠದ ಆವರಣದ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.
ಜಿಲ್ಲಾ ಉಸ್ತುವಾರಿ ಸಚಿವರು ಮಂಡಿ ಶಸ್ತ್ರಚಿಕಿತ್ಸೆ ಪಡೆದು ಆಸ್ಪತ್ರೆಯಲ್ಲಿದ್ದಾರೆ. ಹಾಗಾಗಿ ಕಾರ್ಯಕ್ರಮಗಳಿಗೆ ಹಾಜರಾಗುತ್ತಿಲ್ಲ ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.

Also read: ಕಾನೂನುಗಳು ಗೊಂದಲಮಯವಾಗಿರದೆ ಸ್ಪಷ್ಟ ಉದ್ದೇಶದಿಂದ ರೂಪಿಸಬೇಕು: ಸಿಎಂ ಬೊಮ್ಮಾಯಿ
ಶ್ರೀಘ್ರ ಕ್ರಮ:
ಮುರುಘಾ ಮಠದ ಪ್ರಕರಣದ ಬಗ್ಗೆ ಡಿಸಿ ಅವರು ಸರ್ಕಾರಕ್ಕೆ ವರದಿ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ವರದಿ ಕಾನೂನು ಇಲಾಖೆಯಲ್ಲಿದ್ದು, ಅತಿ ಶೀಘ್ರದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಮುರುಘಾ ಶ್ರೀ ಅವರ ವಿರುದ್ಧ ಪಿತೂರಿ ನಡೆದಿದೆ ಎಂದು ಪ್ರಕರಣ ದಾಖಲಾಗಿ, ಮಾಜಿ ಶಾಸಕರ ಬಂಧನವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ನ್ಯಾಯಾಲಯದಲ್ಲಿದೆ ಪೊಲೀಸ್ ತನಿಖೆ ಮಾಡುತ್ತಿದ್ದಾರೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post