ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೇಂದ್ರ ಸರ್ಕಾರ, ನೆಹರು ಯುವಕೇಂದ್ರ ಹಾಗೂ ಎನ್’ಎಸ್’ಎಸ್ ವತಿಯಿಂದ ಆಯೋಜಿಸಲಾಗಿರುವ ರಾಜ್ಯ ಮಟ್ಟದ ನ್ಯಾಶನಲ್ ಯೂಥ್ ಪಾರ್ಲಿಮೆಂಟ್ ಫೆಸ್ಟಿವಲ್ ಸ್ಪರ್ಧೆಗೆ ಜಿಲ್ಲೆಯ ಇಬ್ಬರು ಯುವತಿಯರು ಆಯ್ಕೆಯಾಗಿದ್ದಾರೆ.
ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಹಾಗೂ ಎನ್’ಎಸ್’ಎಸ್ ಸಂಯುಕ್ತಾಶ್ರಯದಲ್ಲಿ ಡಿ.29ರಂದು ವರ್ಚುವಲ್ ಮಾಧ್ಯಮದ ಮೂಲಕ ನ್ಯಾಶನಲ್ ಯೂಥ್ ಪಾರ್ಲಿಮೆಂಟ್ ಫೆಸ್ಟಿವಲ್-2021 ಜಿಲ್ಲಾಮಟ್ಟದ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ಹೊಸನಗರ ತಾಲೂಕಿನ ಕೃತಿ ಜಿ. ರಾವ್ ಮತ್ತು ಸಾಗರ ತಾಲೂಕಿನ ಪೂಜಾ ಎಂ. ಇಬ್ಬರು ಸ್ಪರ್ಧಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post