ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚೌಕಿದಾರ್ ಚೋರ್ ಹೈ ಎಂದಿದ್ದು ತಪ್ಪು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂ ಕೋರ್ಟಿನಲ್ಲಿ ತಪ್ಪೊಪ್ಪಿಕೊಂಡಿದ್ದಾರೆ.
ರಾಹುಲ್ ಗಾಂಧಿ ಅಫಿಡವಿಟ್’ನಲ್ಲಿ ಮೂರು ದೋಷಗಳಿರುವುದಾಗಿ ಅವರ ಪರ ವಕೀಲ ಎಎಂ ಸಿಂಘ್ವಿ ಕೂಡಾ ಒಪ್ಪಿಕೊಂಡಿದ್ದು, ರಾಹುಲ್ ಗಾಂಧಿ ಕ್ಷಮೆ ಯಾಚಿಸುವುದರೊಂದಿಗೆ ಹೊಸ ಅಫಿಡವಿಟ್ ಸಲ್ಲಿಸುವುದಾಗಿ ಹೇಳಿದ್ದಾರೆ.
ರಾಹುಲ್ ಗಾಂಧಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಅವಕಾಶ ನೀಡಿದ್ದು, ಮತ್ತೊಂದು ಅಫಿಡವಿಟ್ ಸಲ್ಲಿಸುವುದಕ್ಕೆ ಅವಕಾಶ ಕಲ್ಪಿಸಿದ್ದು, ವಿಚಾರಣೆಯನ್ನು ಮೇ 6 ಕ್ಕೆ ಮುಂದೂಡಿದೆ.
ಬಿಜೆಪಿ ಸಂಸದೆ ಮೀನಾಕ್ಷಿ ಲೇಖಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೋಗಯ್ ಅವರಿದ್ದ ಪೀಠ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ತಮ್ಮಿಂದ ತಪ್ಪಾಗಿರುವುದಾಗಿ ರಾಹುಲ್ ಗಾಂಧಿ ಒಪ್ಪಿಕೊಂಡಿದ್ದು, ಸುಪ್ರೀಂಕೋರ್ಟ್ ನಲ್ಲಿ ಕ್ಷಮೆ ಯಾಚಿಸಿದ್ದಾರೆ.
Discussion about this post