ಕಲ್ಪ ಮೀಡಿಯಾ ಹೌಸ್ | ಕಾರ್ಕಳ (ಉಡುಪಿ) |
ಕಾರ್ಕಳ ಇಲ್ಲಿನ ಕ್ರೈಸ್ಟ್ಕಿಂಗ್ ಪ್ರೌಢಶಾಲೆಯ (Christking School) ವಿದ್ಯಾರ್ಥಿಗಳಿಗಾಗಿ ‘ಧ್ಯಾನ ಮತ್ತು ಏಕಾಗ್ರತೆ’ ವಿಷಯದ ಕುರಿತು ತರಬೇತಿ (Training) ಹಾಗೂ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಧನಾತ್ಮಕ ಚಿಂತನೆ ಹಾಗೂ ಕ್ರಿಯಾಶೀಲ ವ್ಯಕ್ತಿತ್ವವನ್ನು ಬೆಳೆಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಧನಾತ್ಮಕ ಚಿಂತನೆ ಬೆಳೆಸಿಕೊಳ್ಳಿ
ಬೆಂಗಳೂರಿನ ಅರೋಹ ಸ್ಪೇಸ್ ಅಕಾಡೆಮಿಯ ಯೋಗ ತರಬೇತುದಾರರಾದ ಪ್ರಿಯಾ ಕೆ.ವಿ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಧ್ಯಾನ ಮತ್ತು ಏಕಾಗ್ರತೆಯ ಕುರಿತು ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮನಸ್ಸಿನಲ್ಲಿ ಹುದುಗಿರುವ ಋಣಾತ್ಮಕ ಆಲೋಚನೆಗಳನ್ನು ದೂರ ಮಾಡಿ, ಧನಾತ್ಮಕ ಚಿಂತನೆಗಳನ್ನು ಬೆಳೆಸಿಕೊಳ್ಳುವ ಮೂಲಕ ಜೀವನದಲ್ಲಿ ಯಶಸ್ಸು ಸಾಧಿಸಲು ಧ್ಯಾನ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು.
ವಿದ್ಯಾರ್ಥಿಗಳು ನಿರಂತರವಾಗಿ ಧ್ಯಾನವನ್ನು ಅಭ್ಯಾಸ ಮಾಡುವ ಮೂಲಕ ತಮ್ಮ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳುವುದರ ಜೊತೆಗೆ, ಕ್ರಿಯಾಶೀಲ ಹಾಗೂ ಸಕಾರಾತ್ಮಕ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
Also Read>> ತುಮಕೂರು–ದಾವಣಗೆರೆ ರೈಲು ಯೋಜನೆ: ತೋಳಹುಣಸೆ–ಹೆಬ್ಬಾಳು ಮಾರ್ಗ ಪರಿಶೀಲನೆ
Christking School: ವಿದ್ಯಾರ್ಥಿಗಳಿಗೆ ಧ್ಯಾನ ತರಬೇತಿ
ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಧ್ಯಾನ ತರಬೇತಿಯನ್ನು ನೀಡಲಾಯಿತು. ಧ್ಯಾನದ ಮೂಲಕ ಮನಸ್ಸನ್ನು ಶಾಂತವಾಗಿಟ್ಟುಕೊಳ್ಳುವುದು, ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳುವುದು ಹಾಗೂ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳುವ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಾಯಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ ಉಪಸ್ಥಿತರಿದ್ದರು. ಪ್ರೌಢಶಾಲಾ ವಿಭಾಗದ ಶಿಕ್ಷಕಿ ರೇಖಾ ಸಂತೋಷ್ ಕಾರ್ಯಕ್ರಮವನ್ನು ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













