ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಎರಡು ದಿನಗಳ ಜಿಲ್ಲಾ ಪ್ರವಾಸದಲ್ಲಿರುವ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಅವರು ಇಂದು ಮುಂಜಾನೆ ಕೈಗೊಳ್ಳಬೇಕಿದ್ದ ಸಿಟಿ ರೌಂಡ್ಸ್ ರದ್ದಾಗಿದೆ.
ಈ ಕುರಿತಂತೆ ಮಾಹಿತಿ ನೀಡಿದ ಸಚಿವರ ಮಾಧ್ಯಮ ಕಾರ್ಯದರ್ಶಿಗಳು, ಆತ್ಮಹತ್ಯೆಗೆ ಶರಣಾದ ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರ ಪಾರ್ಥಿವ ಶರೀರದ ಮರಣೋತ್ತರ ಪರೀಕ್ಷೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಕಾರಣ ನಗರದಲ್ಲಿ ದುಃಖದ ಛಾಯೆ ಆವರಿಸಿದೆ. ಈ ಹಿನ್ನೆಲೆಯಲ್ಲಿ ಇಂದು ಮುಂಜಾನೆ ನಡೆಯಬೇಕಿದ್ದ ಸ್ಮಾರ್ಟ್ ಸಿಟಿ ಕಾಮಗಾರಿಗಳ ವೀಕ್ಷಣೆಗೆ ಸಿಟಿ ರೌಂಡ್ಸ್ ರದ್ದು ಮಾಡಲಾಗಿದೆ. ಬದಲಾಗಿ ಕೇವಲ ಅಧಿಕಾರಿಗಳೊಂದಿಗೆ ಮಾತ್ರ ಸಚಿವರ ಸಭೆ ನಡೆಸಿ, ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post