ಕಲ್ಪ ಮೀಡಿಯಾ ಹೌಸ್ | ಕಲಬುರಗಿ |
ನಗರ ಪೊಲೀಸ್ ಆಯುಕ್ತರೊಂದಿಗೆ ಸಾರ್ವಜನಿಕ ಸ್ಥಳದಲ್ಲಿ ವಾಗ್ವಾದಕ್ಕಿಳಿದ ಏಳು ಜನರ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಪ್ರಕರಣದ ಪ್ರಮುಖ ಆರೋಪಿ ಎಂದು ಹೆಸರಿಸಲಾಗಿರುವ ನಾಸೀರ್ ಅವರು ಕಲಬುರ್ಗಿ ಉತ್ತರ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಆತನ ಸಹಚರರಾದ ಅಫ್ಜಲ್ ಮೊಹಮ್ಮದ್, ಶಫಿ ಪಟೇಲ್, ಮುದ್ದಸ್ಸಿರ್, ಘೌಸ್ ಭಗವಾನ್, ಮಜರ್ ಲಾಟೋರ್, ತಲಾಹ್ ಮತ್ತು ಸೊಹೈಲ್ ಅವರನ್ನು ಪ್ರಕರಣದಲ್ಲಿ ಸಹ ಆರೋಪಿಗಳೆಂದು ಹೆಸರಿಸಲಾಗಿದೆ.
ಚೌಕ್ ಬಳಿ ಪೊಲೀಸರು ಬೀದಿಬದಿ ವ್ಯಾಪಾರಿಗಳನ್ನು ಖಾಲಿ ಮಾಡಿಸುತ್ತಿದ್ದಾಗ ಪೊಲೀಸ್ ಕಮಿಷನರ್ ಚೇತನ್ ಅವರೊಂದಿಗೆ ಜೆಡಿಎಸ್ ಮುಖಂಡ ವಾಗ್ವಾದ ನಡೆಸಿದರು. ಈ ಪ್ರದೇಶದಲ್ಲಿ ಟ್ರಾಫಿಕ್ ಜಾಮ್ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ವರದಿಗಳಂತೆ ಪೊಲೀಸರು ಐಪಿಸಿ ಸೆಕ್ಷನ್ 143, 147, 283 ಮತ್ತು 149 ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post