ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ ಇಂದು ನೀಡಿರುವ ತೀರ್ಪನ್ನು ಎಲ್ಲರೂ ಪಾಲಿಸಿ, ವಿದ್ಯಾರ್ಥಿನಿಯರು ಶಿಕ್ಷಣಕ್ಕೆ ಮಹತ್ವ ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು.
Also Read: ಶಾಲಾ-ಕಾಲೇಜುಗಳನ್ನು ಹಿಜಾಬ್-ಕೇಸರಿ ವಸ್ತ್ರ ಧರಿಸುವಂತಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು
ಹಿಜಾಬ್ ತೀರ್ಪಿನ ಹಿನ್ನೆಲೆಯಲ್ಲಿ ಮಾತನಾಡಿರುವ ಅವರು, ನ್ಯಾಯಪೀಠ ಪ್ರಕಟಿಸಿರುವ ತೀರ್ಪನ್ನು ಪಾಲಿಸಬೇಕಾಗಿರುವುದು ಎಲ್ಲರ ಕರ್ತವ್ಯ. ಹೀಗಾಗಿ ನ್ಯಾಯಾಲಯದ ಆದೇಶದಂತೆ ಎಲ್ಲ ವಿದ್ಯಾರ್ಥಿಗಳು ಪಾಲಿಸಿ, ಯಾವುದೇ ಗೊಂದಲಗಳಿಗೆ ಅವಕಾಶ ನೀಡದೇ, ಶಿಕ್ಷಣಕ್ಕೆ ಮಹತ್ವ ನೀಡಬೇಕು ಎಂದರು.
ಇನ್ನು, ನ್ಯಾಯಾಲಯದ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು ಪ್ರತಿಯೊಬ್ಬರೂ ಸಹಕರಿಸಬೇಕು. ಬದಲಾಗಿ ಯಾರಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದರೆ ಗೃಹ ಇಲಾಖೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post