ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಷರತ್ತುಬದ್ದ ರಜೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.
ಈ ಕುರಿತಂತೆ 50 ವರ್ಷ ಮೀರಿದ ಹಾಗೂ ಮಧುಮೇಹ, ಉಸಿರಾಟ ತೊಂದರೆ, ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿರುವ ಸರ್ಕಾರಿ ನೌಕರರಿಗೆ ಮುಂಜಾಗ್ರತಾ ಕ್ರಮವಾಗಿ ವೇತನ ಸಹಿತ ರಜೆ ನೀಡಲು ಆದೇಶಿಸಲಾಗಿದೆ.
9 ದಿನ ರಾಜ್ಯ ಶಟ್’ಡೌನ್: ಆದೇಶ ಉಲ್ಲಂಘಿಸಿ ಓಡಾಡಿದರೆ ಐಪಿಸಿ ಅಡಿಯಲ್ಲಿ ಕ್ರಿಮಿನಲ್ ಕೇಸ್ ಎದುರಿಸುತ್ತೀರಿ ಎಚ್ಚರ
ಕರ್ನಾಟಕ ನಾಗರಿಕ ಸೇವಾ(ಕೆಸಿಎಸ್’ಆರ್) ನಿಯಮಗಳನ್ನು 1957ನ್ನು ಸಡಿಲಿಸಿ ರಜೆ ಮಂಜೂರು ಮಾಡಿ, ರಾಜ್ಯ ಸರ್ಕಾರ ಸೂಚನೆ ನೀಡಿದೆ. ಎಪ್ರಿಲ್ 4ರ ವರೆಗೆ ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಹಾಜರುಪಡಿಸಿ, ಕರ್ನಾಟಕ ನಾಗರಿಕ ಸೇವಾ ನಿಯಮಗಳ 114ಅಡಿಯಲ್ಲಿ ಪರಿವರ್ತಿತ ರಜೆ ಪಡೆಯಲು ಅರ್ಹರಾಗಿರುತ್ತಾರೆ ಈ ಮೂಲಕ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ನಿಯಂತ್ರಣಾಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ.
Get in Touch With Us info@kalpa.news Whatsapp: 9481252093
Discussion about this post