ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಇಂದು ರಾಜ್ಯ ಬಜೆಟ್ ಮಂಡನೆಗೂ ಮುನ್ನ ಟೆಂಪಲ್ ರನ್ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜ್ಯದ ಸುಭಿಕ್ಷಕ್ಕಾಗಿ ಪ್ರಾರ್ಥಿಸಿದ್ದಾರೆ.
ಇಂದು ಮುಂಜಾನೆ ಬಜೆಟ್ ಪ್ರತಿ ಹೊಂದಿರುವ ಸೂಟ್’ಕೇಸ್’ನೊಂದಿಗೆ ಮಲ್ಲೇಶ್ವರಂನಲ್ಲಿರುವ ಗಣಪತಿ ದೇವಾಲಯಕ್ಕೆ ಭೇಟಿ ನೀಡಿರುವ ಸಿಎಂ, ರಾಜ್ಯದ ಹಿತ ಹಾಗೂ ಸುಭಿಕ್ಷಕ್ಕಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ, ಪುತ್ರ ಬಿ.ವೈ. ವಿಜಯೇಂದ್ರ, ಶಾಸಕ ಎಸ್.ಆರ್. ವಿಶ್ವನಾಥ್ ಸೇರಿದಂತೆ ಹಲವರು ಇದ್ದರು.
Get in Touch With Us info@kalpa.news Whatsapp: 9481252093














