ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಕಸ್ತೂರಿರಂಗನ್ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (CM DK Shivakumar) ಅವರು ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಗೆ (Thirthahalli) ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಹಲವು ಕಾಮಗಾರಿಗಳು ಚುರುಕುಗೊಂಡಿವೆ.
ಇದೇ ವೇಳೆ ಕಳೆದ ಎರಡು ವರ್ಷಗಳಿಂದ ಹೊಂಡ-ಗುಂಡಿಗಳಿಂದ ಕೂಡಿದ್ದ ರಸ್ತೆಯೊಂದಕ್ಕೆ ಪಟ್ಟಣ ಪಂಚಾಯಿತಿ ಆಡಳಿತ ಡಾಂಬರೀಕರಣ ಕಾಮಗಾರಿ ಕೈಗೊಂಡಿದೆ.
ದೀರ್ಘಕಾಲದಿಂದ ರಸ್ತೆ ದುರಸ್ತಿಗೆ ಆಗ್ರಹಿಸುತ್ತಿದ್ದ ಸ್ಥಳೀಯರು ಇದೀಗ ಕಾಮಗಾರಿ ಆರಂಭವಾಗಿರುವುದನ್ನು ಗಮನಿಸಿದ್ದಾರೆ. ಮುಖ್ಯಮಂತ್ರಿ ಆಗಮನದ ಹಿನ್ನೆಲೆಯಲ್ಲಿ ರಸ್ತೆ ದುರಸ್ತಿ ಕಾರ್ಯಕ್ಕೆ ವೇಗ ಸಿಕ್ಕಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
CM DK Shivakumar : ‘ಮುಖ್ಯಮಂತ್ರಿಗಳೇ ಬರಬೇಕಾಯಿತು’ ಎಂಬ ಸಾರ್ವಜನಿಕರ ಮಾತು
ತೀರ್ಥಹಳ್ಳಿ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ ಆಡಳಿತವಿದ್ದರೂ, ಕಳೆದ ಎರಡು ವರ್ಷಗಳಿಂದ ರಸ್ತೆ ದುರಸ್ತಿಯಾಗಿರಲಿಲ್ಲ. ಇದೀಗ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪಟ್ಟಣಕ್ಕೆ ಆಗಮಿಸುವ ಸಂದರ್ಭದಲ್ಲಿ ರಸ್ತೆ ಡಾಂಬರೀಕರಣ ಆರಂಭವಾಗಿರುವ ಹಿನ್ನೆಲೆಯಲ್ಲಿ, “ರಸ್ತೆಯ ಹೊಂಡ-ಗುಂಡಿ ಮುಚ್ಚಲು ಮುಖ್ಯಮಂತ್ರಿಗಳೇ ಬರಬೇಕಾಯಿತು” ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.
Also Read>> ಯುಪಿಐ ಶುಲ್ಕ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ: ಮಹಾವೀರ ವೃತ್ತದಲ್ಲಿ ಮಾನವ ಸರಪಳಿ
ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ ಆರಂಭವಾಗಿರುವ ಈ ಕಾಮಗಾರಿಯು ಸ್ಥಳೀಯರಿಗೆ ತಾತ್ಕಾಲಿಕವಾಗಿಯಾದರೂ ಸುಗಮ ಸಂಚಾರಕ್ಕೆ ಅನುಕೂಲವಾಗಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









