ತೂತುಕುಡಿ: ತಾವು ಮುಖ್ಯಮಂತ್ರಿಯಾದ ನಂತರ ಆರಂಭಿಸಿರುವ ಟೆಂಪಲ್ ರನ್ ಮುಂದುವರೆಸಿರುವ ಎಚ್.ಡಿ. ಕುಮಾರಸ್ವಾಮಿ, ಇಂದು ಕುಟುಂಬ ಸಹಿತ ತಮಿಳುನಾಡಿನ ಐತಿಹಾಸಿಕ ತಿರುಚೆಂಬೂರು ಮುರಗನ್ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತೆರಳಿದ ಕುಮಾರಸ್ವಾಮಿ ಅವರಿಗೆ ತೂತುಕುಡಿಯಲ್ಲಿ ಗೌರವ ವಂದನೆ ಸಲ್ಲಿಸಲಾಯಿತು.
ಕುಮಾರಸ್ವಾಮಿ ಭೇಟಿ ಹಿನ್ನೆಲೆಯಲ್ಲಿ ದೇವಾಲಯಕ್ಕೆ ವಿಶೇಷ ಭದ್ರತೆ ಕಲ್ಪಿಸಲಾಗಿತ್ತು. ಈ ವೇಳೆ ಸುದ್ದಿಗಾರರೊಂದಿಗೆ ಹೆಚ್ಚಾಗಿ ಮಾತನಾಡದ ಕುಮಾರಸ್ವಾಮಿ, ರಾಜ್ಯ ಸರ್ಕಾರದಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ.. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದಷ್ಟೇ ಹೇಳಿದ್ದಾರೆ.
Discussion about this post