ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಗೃಹ ಸಚಿವ ಅಮಿತ್ ಶಾ #AmitShah ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ #PMNarendraModi ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #Siddharamaiah ಅವರು ತಿಳಿಸಿದರು.
ಪ್ರಧಾನಿ ಮೋದಿ ಅವರ ಭೇಟಿ ಬಳಿಕ ಮಾಧ್ಯಮದವರ ಜತೆ ಮಾತನಾಡಿ ವಿವರ ನೀಡಿದರು.
ರಾಜ್ಯಕ್ಕೆ ಬರ ಪರಿಹಾರ ಸಿಗಬೇಕು ಎಂದರೆ ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಕಮಿತಿ ಸಭೆ ನಡೆಯಬೇಕು. ಆದರೆ ನಾವು ಇದುವರೆಗೂ ಮೂರು ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರೂ ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ಆದ್ದರಿಂದ ತುರ್ತಾಗಿ ಸಭೆ ನಡೆಸಿ ಶೀಘ್ರ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿ ಅವರಿಗೆ ಮನವಿ ಮಾಡಿದ್ದೇವೆ ಎಂದರು.
ನಾವು ಮುಖ್ಯವಾಗಿ ಐದು ಒತ್ತಾಯಗಳನ್ನು ಮಂಡಸಿ ಮನವಿ ಮಾಡಿದ್ದೇವೆ. ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿಸಿಕೊಂಡು ಪ್ರಧಾನಿ #PrimeMinister ಅವರು ಸ್ಪಂದಿಸಿದ್ದಾರೆ. ಸ್ಪಂದನೆಗೆ ತಕ್ಕಂತೆ ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯ ಹೈಲೈಟ್ಸ್
- ಬರ ಪರಿಹಾರ ಶೀಘ್ರ ಬಿಡುಗಡೆ ಮಾಡಬೇಕು.
- ನರೇಗಾ ಕೆಲಸವನ್ನು 150 ದಿನಗಳಗೆ ಹೆಚ್ಚಿಸಬೇಕು.
- ಭದ್ರಾ ಮೇಲ್ದಂಡೆಗೆ ಕೊಟ್ಟ ಮಾತಿನಂತೆ ಹಣ ಬಿಡುಗಡೆ ಮಾಡಬೇಕು.
- ಮಹದಾಯಿ ಯೋಜನೆಗೆ ಪರಿಸರ ಕ್ಲಿಯರೆನ್ಸ್ ಶೀಘ್ರವಾಗಿ ನೀಡಬೇಕು.
- ಮೇಕೆದಾಟು ಯೋಜನೆ ಕಾರ್ಯಾರಂಭಕ್ಕೆ ಅನುಮತಿಸಬೇಕು.
- ಬರ ಪರಿಹಾರ ಸಂಬಂಧ ಇವತ್ತಿನವರೆಗೂ ಹೈಲೆವೆಲ್ ಕಮಿಟಿ ಮೀಟಿಂಗ್ ಮಾಡಿಲ್ಲ. ಇದರಿಂದ ರಾಜ್ಯದ ರೈತರ ಸಂಕಷ್ಟಕ್ಕೆ ಕೇಂದ್ರದಿಙದ ಬರಬೇಕಾದ ಪರಿಹಾರ ಬರುತ್ತಿಲ್ಲ.
- ಪ್ರಧಾನಿ ನಮ್ಮ ಮನವಿಯನ್ನು ಸಮಾಧಾನದಿಂದ ಕೇಳಿದರು. ಅಮಿತ್ ಶಾ ಅವರಿಗೆ ಸೂಚನೆ ನೀಡಲು ಮನವಿ ಮಾಡಿದ್ದೇವೆ.
- ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು 100 ರಿಂದ 150 ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಅದರಂತೆ ಹೆಚ್ಚಿಸಲು 3 ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ ಈ ಮನವಿಯನ್ನು ಮಾಡಿದ್ದೇವೆ. ಈ ಮನವಿ ಈಡೇರಿಲ್ಲ. ಈ ಬಗ್ಗೆಯೂ ತುರ್ತಾಗಿ ತೀರ್ಮಾನ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದೇವೆ.
- ಮಹದಾಯಿ ವಿಚಾರದಲ್ಲಿ ಈಗಾಗಲೇ ಗೆಜೆಟ್ ಕೂಡ ಆಗಿದೆ. ಬೇರೆ ಅಡೆ ತಡೆ ಏನೂ ಇಲ್ಲ. ಪರಿಸರ ಕ್ಲಿಯರೆನ್ಸ್ ಮಾತ್ರ ಬಾಕಿ ಇದೆ. ಇದನ್ನು ಕೇಂದ್ರವೇ ಕೊಡಬೇಕು. ಇದುವರೆಗೂ ಕೊಟ್ಟಿಲ್ಲ. ಟೆಂಡರ್ ಕರೆದು ಎಸ್ಟಿಮೇಟ್ ಕೂಡ ಆಗಿದೆ. ಕೇಂದ್ರ ಕ್ಲಿಯರೆನ್ಸ್ ಕೊಟ್ಟ ಕೂಡಲೇ ಕೆಲಸ ಶುರು ಮಾಡಬಹುದು. ಆದ್ದರಿಂದ ಬೇಗ ಕ್ಲಿತರೆನ್ಸ್ ಕೊಡಿಸುವಂತೆ ಒತ್ತಾಯಿಸಿದ್ದೇವೆ.
- ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ 5300 ಕೋಟಿ ಘೋಷಿಸಿದ್ದರು. ಇವರ ಘೋಷಣೆ ಆಧಾರದಲ್ಲಿ ಹಿಂದಿನ ಮುಖ್ಯಮಂತ್ರಿ ಬೊಮ್ಮಾಯಿ ಅವರೂ ಕೂಡ 5300 ಕೋಟಿ ಘೋಷಿಸಿದ್ದರು. ಇವತ್ತಿನವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಇದು ಕೇಂದ್ರ ಮತ್ತು ಹಿಂದಿನ ಬಿಜೆಪಿ ಸರ್ಕಾರದ ಕಮಿಟ್ ಮೆಂಟ್. ನೀವೇ ಕೊಟ್ಟಿರುವ ಮಾತಿನಂತೆ ಹಣ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ್ದೇವೆ.
- ಮೇಕೆದಾಟು, ಕುಡಿಯುವ ನೀರಿನ ಯೋಜನೆ. ರಾಜ್ಯದ ಗಡಿಯ ಒಳಗೆ ನಿರ್ಮಾಣ ಆಗುವ ಯೋಜನೆ. ತಮಿಳುನಾಡು ಸರ್ಕಾರ ರಾಜಕೀಯ ಕಾರಣಕ್ಕೆ ತಕರಾರು ಮಾಡುತ್ತಿದೆ. ಇದರಿಂದ ತಮಿಳುನಾಡಿಗೇ ಹೆಚ್ಚು ಅನುಕೂಲ. ನಮಗೆ ಕುಡಿಯುವ ನೀರಿನ ಜತೆಗೆ 400 ಮೆಘಾ ವ್ಯಾಟ್ ವಿದ್ಯುತ್ ಉತ್ಪಾದನೆ ಆಗುತ್ತದೆ. ವಿದ್ಯುತ್ ಉತ್ಪಾದನೆ ಬಳಿಕ ಈ ನೀರು ಕೂಡ ತಮಿಳುನಾಡಿಗೇ ಹೋಗ್ತದೆ. ಇದರಿಂದಲೂ ಅವರಿಗೇ ಅನುಕೂಲ.
- ಮೇಕೆದಾಟು ಆದರೆ ಬೆಂಗಳೂರು ಮತ್ತು ರಾಮನಗರ ಜಿಲ್ಲೆಗೆ ಕುಡಿಯುವ ನೀರಿಗೆ ಅನುಕೂಲ ಆಗತ್ತೆ. ಆದ್ದರಿಂದ ಮೇಕೆದಾಟುಗೆ ಬೇಗ ಅನುಮತಿ ಕೊಡಿಸುವಂತೆ ಪ್ರಧಾನಿಗಳ ಗಮನಕ್ಕೆ ತಂದು ಒತ್ತಾಯಿಸಿದ್ದೇವೆ.
- ಮಹದಾಯಿ, ಮೇಕೆದಾಟು, ಭದ್ರಾ ಮೇಲ್ಸಂಡೆ ಯೋಜನೆಗಳಿಗಾಗಿ ನಾವು ಸರ್ವ ಪಕ್ಷ ನಿಯೋಗದ ಜತೆ ಕೇಂದ್ರಕ್ಕೆ ಬರಲು ಸಿದ್ದರಿದ್ದೇವೆ.
- ಆದಷ್ಟು ಬೇಗ ನಿಗಮ ಮಂಡಳಿ ಅಂತಿಮ. ಮೊದಲ ಹಂತದಲ್ಲಿ MLA ಗಳದ್ದು. Next ಕಾರ್ಯಕರ್ತರದ್ದು.
(ವರದಿ: ಡಿ.ಎಲ್. ಹರೀಶ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post