ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಎಪಿಎಂಸಿ (APMC) ಮಾರುಕಟ್ಟೆಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದಿಢೀರ್ ಭೇಟಿ ನೀಡಿ ಅಲ್ಲಿನ ಕಾರ್ಮಿಕರ ಹಾಗೂ ವ್ಯಾಪಾರಿಗಳ ಸಮಸ್ಯೆಗಳನ್ನು ಖುದ್ದು ಆಲಿಸಿದ ಕ್ರಮವನ್ನು ರಾಜ್ಯ ಹೈಕೋರ್ಟ್ (High Court) ಶ್ಲಾಘಿಸಿದೆ.
ಕಾರ್ಮಿಕರ ಸಮಸ್ಯೆಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಏಕಸದಸ್ಯ ಪೀಠ ಪ್ರಶಂಸೆ ವ್ಯಕ್ತಪಡಿಸಿದೆ.
ಮುಖ್ಯಮಂತ್ರಿಗಳ ಈ ದಿಢೀರ್ ಭೇಟಿಯನ್ನು ಕೆಲವರು ಗಿಮಿಕ್ ಎಂದು ಕರೆದರೂ, ನಿಸ್ಸಂದೇಹವಾಗಿ ಇದೊಂದು ಶ್ಲಾಘನೀಯ ಕಾರ್ಯ. ಸಿಎಂ ಅವರು ಖುದ್ದು ಮಾರುಕಟ್ಟೆಗೆ ತೆರಳಿ ಈರುಳ್ಳಿ ಮತ್ತು ಬೆಳ್ಳುಳ್ಳಿ ವರ್ತಕರು ಹಾಗೂ ಹಮಾಲಿ ಕಾರ್ಮಿಕರ ಕಷ್ಟ-ಸುಖಗಳನ್ನು ಆಲಿಸಿದ್ದಾರೆ. ವಿಶೇಷವಾಗಿ ಅಲ್ಲಿನ ಶ್ರಮಜೀವಿ ಮಹಿಳೆಯರ ಜೊತೆ ಕುಳಿತು ಅವರ ಸಮಸ್ಯೆಗಳನ್ನು ಆಲಿಸಿರುವುದು ಅತ್ಯಂತ ಸಂತಸದ ವಿಚಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Also read>> ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ: ಸಚಿವ ಮಧು ಬಂಗಾರಪ್ಪ
ಈ ಸಂದರ್ಭದಲ್ಲಿ ರಾಜ್ಯದ ಎಪಿಎಂಸಿ ಮಾರುಕಟ್ಟೆಗಳ ದುಸ್ಥಿತಿ, ಮಧ್ಯವರ್ತಿಗಳ ಹಾವಳಿ ಹಾಗೂ ಮೂಲಸೌಕರ್ಯಗಳ ಕೊರತೆ ಬಗ್ಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಮಾರುಕಟ್ಟೆಯಲ್ಲಿನ ಮಧ್ಯವರ್ತಿಗಳ ಹಾವಳಿ ಹಾಗೂ ಮೂಲಸೌಕರ್ಯಗಳ ಕೊರತೆಯ ನಡುವೆ, ಮುಖ್ಯಮಂತ್ರಿಗಳು ತಳಮಟ್ಟದ ಕಾರ್ಮಿಕರ ಜೊತೆ ನೇರವಾಗಿ ಸಂವಾದ ನಡೆಸಿರುವುದು ಆಡಳಿತಕ್ಕೆ ಸಕಾರಾತ್ಮಕ ಸಂದೇಶ ನೀಡಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 








