ಕಲ್ಪ ಮೀಡಿಯಾ ಹೌಸ್ | ಚೆನ್ನೈ |
ತಮಿಳುನಾಡಿನ #Tamilnadu ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ದಿನವೇ ಸಿಎಂ ವಿಜಯ್ #CMJosephVijay ಅವರು ಹಿಂದಿನ ಡಿಎಂಕೆ ಸರ್ಕಾರಕ್ಕೆ ಶಾಕ್ ನೀಡಿದ್ದಾರೆ.
ಹೌದು… ಡಿಎಂಕೆ #DMK ಅವಧಿಯಲ್ಲಿನ ಸರ್ಕಾರದ ಆರ್ಥಿಕ ಸ್ಥಿತಿಗತಿಯ ಬಗ್ಗೆ ಶ್ವೇತಪತ್ರ ಹೊರಡಿಸುತ್ತೇನೆ ಎಂದು ಘೋಷಣೆ ಮಾಡುವ ಮೂಲಕ ಮಾಜಿ ಸಿಎಂ ಸ್ಟಾಲಿನ್’ಗೆ ಶಾಕ್ ನೀಡಿದ್ದಾರೆ.
ಪ್ರಮಾಣವಚನ ಸ್ವೀಕರಿಸಿದ ಬಳಿಕ ಜನತೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಜೋಸೆಫ್ ವಿಜಯ್, ಹಿಂದಿನ ಡಿಎಂಕೆ ಸರ್ಕಾರವು ರಾಜ್ಯದ ಮೇಲೆ ರೂ. 10 ಲಕ್ಷ ಕೋಟಿ ಸಾಲವನ್ನು ಉಳಿಸಿದೆ. ನನ್ನ ಮೇಲೆ ಎಷ್ಟು ಹೊರೆಯನ್ನು ಹೊರಿಸಿದ್ದಾರೆ ಎಂಬುದನ್ನು ನಿಮಗೆಲ್ಲ ತಿಳಿಸಲು ಬಯಸುತ್ತೇನೆ. 2021-2026 ಅವಧಿಗೆ ರಾಜ್ಯದ ಹಣಕಾಸು ವ್ಯವಹಾರದ ಕುರಿತು ಶ್ವೇತಪತ್ರ ಬಿಡುಗಡೆ ಮಾಡುತ್ತೇನೆ ಎಂದಿದ್ದಾರೆ.
ಬೆಂಗಳೂರು | ಪ್ರಧಾನಿ ಮೋದಿ ತೆರಳುವ ಮಾರ್ಗ ಸಮೀಪ ಜಿಲೆಟಿನ್ ಕಡ್ಡಿಗಳು ಪತ್ತೆ | ಶಂಕಿತ ವಶಕ್ಕೆ
ಇನ್ನು, ರಾಜ್ಯದಲ್ಲಿ ಭ್ರಷ್ಟಾಚಾರ #Corruption ಮುಕ್ತ ಮತ್ತು ಪಾರದರ್ಶಕ ಆಡಳಿತದ ಭರವಸೆ ನೀಡಿರುವ ಸಿಎಂ ವಿಜಯ್, ಗುಣಮಟ್ಟದ ಶಿಕ್ಷಣ, ಉತ್ತಮ ಆಹಾರ, ಆರೋಗ್ಯ ಸುಧಾರಣೆ ಮತ್ತು ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವುದಾಗಿ ಹೇಳಿದ್ದಾರೆ.
ಇದಲ್ಲದೆ ಮಹಿಳೆಯರ ಸುರಕ್ಷತೆ ಸಲುವಾಗಿ ವಿಶೇಷ ಪಡೆಗಳನ್ನು ರಚಿಸುವುದು ಮತ್ತು ರಾಜ್ಯದಾದ್ಯಂತ ಮಾದಕವಸ್ತು ನಿರ್ಮೂಲನೆಗಾಗಿ ಪ್ರತಿ ಜಿಲ್ಲೆಯಲ್ಲೂ ಮಾದಕವಸ್ತು ವಿರೋಧಿ ಘಟಕಗಳನ್ನು ಸ್ಥಾಪಿಸುವುದಾಗಿ ಘೋಷಿಸಿದರು.
200 ಯೂನಿಟ್ ಉಚಿತ ವಿದ್ಯುತ್ ಹಾಗೂ ಮಹಿಳೆಯರಿಗೆ ವಿಶೇಷ ಕಾರ್ಯಪಡೆ ರಚಿಸುವುದಾಗಿ ತಮಿಳುನಾಡಿನ ನೂತನ ಸಿಎಂ ವಿಜಯ್ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.
Also Read>> ಕಾಂಗ್ರೆಸ್ ಎಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲೆಲ್ಲಾ ಗುಂಪುಗಾರಿಕೆ | ಪ್ರಧಾನಿ ಮೋದಿ ಟೀಕೆ
ತಮಿಳುನಾಡು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್ ಈ ಗ್ಯಾರಂಟಿಗಳನ್ನು ಘೋಷಿಸಿದ್ದಾರೆ. ಗೃಹ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ಕಡತಕ್ಕೆ ವಿಜಯ್ ಸಹಿ ಹಾಕಿದ್ದಾರೆ. ಈ ಸಂದರ್ಭ ಮಹಿಳೆಯರ ರಕ್ಷಣೆಗಾಗಿ ವಿಶೇಷ ಪಡೆ ರಚಿಸುವುದಾಗಿ ಭರವಸೆ ನೀಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Comments 1