ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕೋವಿಡ್19 ವರದಿ ನೆಗೆಟಿವ್ ಬಂದಿದ್ದು, ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಆಗಸ್ಟ್ 2ರಂದು ಆಸ್ಪತ್ರೆಗೆ ದಾಖಲಾಗಿರುವ ಯಡಿಯೂರಪ್ಪ ಅವರಿಗೆ ಭಾನುವಾರ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಮಂಗಳವಾರ ಮತ್ತೊಮ್ಮೆ ಪರೀಕ್ಷೆ ನಡೆಸಲಾಗುತ್ತದೆ. ನೆಗೆಟಿವ್ ಬಂದಿದ್ದೇ ಆದರೆ, ಬಳಿಕ ಮತ್ತೊಂದು ಸುತ್ತಿನ ಆರೋಗ್ಯ ಪರೀಕ್ಷೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ಯಡಿಯೂರಪ್ಪ ಅವರು ಲಕ್ಷಣ ರಹಿತ ಸೋಂಕು ಪೀಡಿತರಾಗಿದ್ದು, ಕರ್ನಾಟಕದಲ್ಲಿ ಪ್ರಸ್ತುತ ಚಾಲನೆಯಲ್ಲಿರುವ ಮಾರ್ಗಸೂಚಿಗಳ ಪ್ರಕಾರ ಆಮ್ಲಜಕ ಶುದ್ಧತ್ವದ ಪ್ರಮಾಣ ಶೇ.95ಕ್ಕಿಂತಲೂ ಹೆಚ್ಚಿದ್ದರೆ, ಶ್ವಾಸಕೋಶದ ಪ್ರಮಾಣ ನಿಮಿಷಕ್ಕೆ ಶೇ.24ರಷ್ಟಿದ್ದರೆ, ಪರೀಕ್ಷೆ ಮಾಡದೆಯೇ ಬಿಡುಗಡೆ ಮಾಡಬಹುದು ಎಂದು ಹೇಳಲಾಗಿದೆ.
Get In Touch With Us info@kalpa.news Whatsapp: 9481252093
















