ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಲ್ಲಿ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದು, ಈ ಮೂಲಕ ಹಲವು ವರ್ಷಗಳ ಬೇಡಿಕೆ ಈಡೇರಿದಂತಾಗಿದೆ.
ಈ ಕುರಿತಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಜನಾಂಗದವರು ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇವರಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದವರಿದ್ದಾರೆ. ಈ ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದು ಅಗತ್ಯವಿರುವುದರಿಂದ ತತಕ್ಷಣದಿಂದ ಜಾರಿಗೆ ಬರುವಂತೆ ಈ ನಿಗಮವನ್ನು ಸ್ಥಾಪನೆ ಮಾಡಲು ಆದೇಶಿಸಲಾಗಿದೆ ಎಂದು ಉಲ್ಲೇಖಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post