ಬೆಂಗಳೂರು: ರಾಜ್ಯದಲ್ಲಿ ರೂಪಾಂತರಿ ಕೊರೋನಾ ಸೋಂಕು ಪತ್ತೆಯಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಾಳೆ ಮಹತ್ವದ ಸುದ್ದಿಗೋಷ್ಠಿ ನಡೆಸಲಿದ್ದು, ಭಾರೀ ಕುತೂಹಲ ಕೆರಳಿಸಿದೆ.
ನಾಳೆ ಮುಖ್ಯಮಂತ್ರಿಗಳು ಸುದ್ದಿಗೋಷ್ಠಿ ನಡೆಸಲಿದ್ದು, ರೂಪಾಂತರಿ ಕೊರೋನಾ ಸಂಬಂಧಿಸಿದಂತೆ ಮಾಹಿತಿ ನೀಡಲಿದ್ದಾರೆ ಎಂದು ಹೇಳಲಾಗಿದ್ದು, ಮತ್ತೆ ಲಾಕ್ ಡೌನ್ ಘೋಷಣೆಯಾಗಲಿದೆಯಾ ಅಥವಾ ಸೀಲ್ ಡೌನ್ ಕುರಿತಾಗಿ ಹೊಸ ನಿಯಮವಾಗಳಿಗಳನ್ನು ಘೋಷಣೆ ಮಾಡಲಿದ್ದಾರಾ ಎಂಬ ಕುತೂಹಲ ಕೆರಳಿಸಿದೆ.
ಬೆಂಗಳೂರು ಹಾಗೂ ಶಿವಮೊಗ್ಗದಲ್ಲಿ ಒಟ್ಟು 11 ಮಂದಿಗೆ ರೂಪಾಂತರಿ ಕೊರೋನಾ ದೃಢಪಟ್ಟಿದ್ದು, ಭಾರೀ ಆತಂಕವನ್ನು ಸೃಷ್ಠಿಸಿದೆ. ಈ ಹಿನ್ನೆಲೆಯಲ್ಲಿ ಉನ್ನತಮಟ್ಟದ ಸಭೆಗಳು ನಡೆಯುತ್ತಿದ್ದು, ಇದರ ಬೆನ್ನಲ್ಲೇ ನಾಳೆ ಮುಖ್ಯಮಂತ್ರಿಗಳು ನಡೆಸಲಿರುವ ಸುದ್ದಿಗೋಷ್ಠಿ ಭಾರೀ ಮಹತ್ವವನ್ನು ಪಡೆದುಕೊಂಡಿದೆ.
Discussion about this post