ಕಲ್ಪ ಮೀಡಿಯಾ ಹೌಸ್ | ಉಡುಪಿ |
ಇಲ್ಲಿನ ಮಂದಾರ್ತಿ ಬಳಿಯಲ್ಲಿ ಕಾರೊಂದರಲ್ಲಿ ಇಬ್ಬರ ಶವ ಸುಟ್ಟು ಹೋದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಮಂದಾರ್ತಿ ಬಳಿಯ ಹೆಗ್ಗುಂಜೆಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿ ಸುಟ್ಟು ಕರಕಲಾಗಿರುವ ಇಬ್ಬರನ್ನು ಬೆಂಗಳೂರಿನ ಯಶವಂತ್ ಯಾದವ್ ಹಾಗೂ ಜ್ಯೋತಿ ಎಂದು ಗುರುತಿಸಲಾಗಿದ್ದು, ಇಬ್ಬರೂ ಪ್ರೇಮಿಗಳು ಎಂದು ಹೇಳಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಆಗಮಿಸಿದ್ದ ಇಬ್ಬರು ಕಾರೊಂದನ್ನು ಬಾಡಿಗೆಗೆ ಪಡೆದಿದ್ದರು. ಹೆಗ್ಗುಂಜೆ ಬಳಿಯಲ್ಲಿ ಕಾರು ಹೊತ್ತಿ ಉರಿಯುತ್ತಿರುವುದನ್ನು ಕಂಡ ಸ್ಥಳೀಯರು ಬೆಂಕಿ ನಂದಿಸಿ ನೋಡಿದಾಗಿ ಒಳಗೆ ಇಬ್ಬರ ಶವ ಪತ್ತೆಯಾಗಿದೆ. ತತಕ್ಷಣ ಮಾಹಿತಿ ತಿಳಿದ ಬ್ರಹ್ಮಾವರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಇಬ್ಬರು ನಾಪತ್ತೆಯಾಗಿರುವ ಕುರಿತಾಗಿ ಬೆಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಪ್ರಕರಣ ದಾಖಲಾಗಿತ್ತು. ಆತ್ಮಹತ್ಯೆಗೂ ಮುನ್ನ ಕುಟುಂಬಸ್ಥರಿಗೆ ಮೆಸೇಜ್ ಮಾಡಿದ್ದರು ಎನ್ನಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















