ಕಲ್ಪ ಮೀಡಿಯಾ ಹೌಸ್ | ಕೊಯಮತ್ತೂರು |
ಪೆಟ್ರೋಲ್ ಟ್ಯಾಂಕರ್ ಹಾಗೂ ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿದ ತಿರುಪ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಧಾರಾಪುರಂ ಪಳನಿ ರಸ್ತೆಯಲ್ಲಿ ಘಟನೆ ನಡೆದಿದ್ದು, ಮೃತರನ್ನು ತಮಿಳುಮಣಿ (51), ಚಿತ್ರಾ (49), ಸೆಲ್ವರಾಣಿ (70), ಬಾಲಕೃಷ್ಣನ್ (78), ಮತ್ತು ಕಲಾರಾಣಿ (50) ಎಂದು ಗುರುತಿಸಲಾಗಿದೆ.
ಮೃತರೆಲ್ಲರೂ ದಿಂಡಿಗಲ್ ಜಿಲ್ಲೆಯ ಪಳನಿಯಲ್ಲಿ ನಡೆದ ಮದುವೆ ಕಾರ್ಯಕ್ರಮ ಮುಗಿಸಿ ವಾಪಾಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
Also read: ಉಗ್ರರನ್ನು ಹುಡುಕಿ-ಹುಡುಕಿ ಹೊಡೆದುರುಳಿಸುತ್ತಿದೆ ಸೇನೆ | ಐವರು ಲಷ್ಕರ್ ಉಗ್ರರ ಎನ್’ಕೌಂಟರ್
ಧಾರಾಪುರಂ-ಪಳನಿ ರಸ್ತೆಯ ಮಣಕ್ಕಡವು-ಆಲಂಕಾಡು ಬಸ್ ನಿಲ್ದಾಣದ ಬಳಿ ಬಂದಾಗ ವಾಹನ ನಿಯಂತ್ರಣ ತಪ್ಪಿದ್ದು, ಈ ವೇಳೆ ಎದುರಿನಿಂದ ಬರುತ್ತಿದ್ದ ಟ್ರಕ್’ಗೆ ಡಿಕ್ಕಿ ಹೊಡೆದಿದೆ.
ಅಪಘಾತದಲ್ಲಿ ಮೃತರಾದವರಿಗೆ ಮುಖ್ಯಮಂತ್ರಿ ಸ್ಟಾಲಿನ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















