ಕಲ್ಪ ಮೀಡಿಯಾ ಹೌಸ್ | ಕೊಯಮತ್ತೂರು |
ಮಹಾಶಿವರಾತ್ರಿ ಪ್ರಯುಕ್ತ ಇಶಾ ಫೌಂಡೇಶನ್ #Isha Foundation ವತಿಯಿಂದ ಬುಧವಾರ ಆಯೋಜಿಸಲಾಗಿದ್ದ ಶಿವರಾತ್ರಿ #Shivaratri ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ #Amith Shah ಮತ್ತು ಡಿಸಿಎಂ ಡಿಕೆ ಶಿವಕುಮಾರ್ #D K Shivakumar ಭಾಗಿಯಾಗಿದ್ದರು.
ಇಶಾ ಯೋಗ ಕೇಂದ್ರದಲ್ಲಿ ಮಹಾ ಶಿವರಾತ್ರಿ ಆಚರಣೆಗಳು ಬುಧವಾರ ಸಂಜೆ 6 ಗಂಟೆಯಿಂದ ಆರಂಭವಾಗಿ ಗುರುವಾರ ಬೆಳಗ್ಗೆ 6 ಗಂಟೆಯವರೆಗೆ ನಡೆಯಿತು. ಸಾವಿರಾರು ಜನರು ಭಾಗಿಯಾಗಿರುವ ಕಾರ್ಯಕ್ರಮದಲ್ಲಿ ಇಶಾ ಫೌಂಡೇಶನ್ ಸಂಸ್ಥಾಪಕ ಜಗ್ಗಿ ವಾಸುದೇವ್ ಜೊತೆ ಡಿಕೆ ಶಿವಕುಮಾರ್, ಅಮಿತ್ ಶಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಿಸಿಎಂ ಡಿ ಕೆ ಶಿವಕುಮಾರ್ ಬಿಜೆಪಿ ಮುಖಂಡರ ಜೊತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದು ಹಲವು ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದ್ದು, ಹಲವು ರಾಜಕೀಯ ಬೆಳವಣಿಗೆಗೆಗಳಿಗೆ ನಾಂದಿಯಾಗಲಿದೆ ಎಂದು ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post