ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಬಾಳೆಬೈಲು ಸಮೀಪದ ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ, ಎರಡೂ ವಾಹನಗಳು ಸಂಪೂರ್ಣ ಜಖಂಗೊಂಡ ಘಟನೆ ಭಾನುವಾರ ನಡೆದಿದೆ.
ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ ರಿಟ್ಜ್ ಕಾರು ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.

Also read: ಶಿಕಾರಿಪುರ | ಯುವಕರು ಪ್ರಗತಿಗೆ ಸದಾ ಸಿದ್ಧರಾಗಿರಬೇಕು | ಡಾ.ರವೀಂದ್ರ ಕರೆ
ಅಪಘಾತದ ಪರಿಣಾಮ ಎರಡೂ ಕಾರುಗಳಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಪಟ್ಟಣದ ಜೆ.ಸಿ. ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇನ್ನೋವಾ ಕಾರು ದಾವಣಗೆರೆ ಮೂಲದ್ದಾಗಿದ್ದು, ರಿಟ್ಜ್ ಕಾರು ಕುರುವಳ್ಳಿ ಗ್ರಾಮಕ್ಕೆ ಸೇರಿದ್ದು ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















