No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
  • Advertise With Us
  • Grievances
  • About Us
  • Contact Us
Friday, June 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜನವರಿ 1ರೊಳಗಾಗಿ ನಗರದ ರಸ್ತೆಗಳ ದುರಸ್ತಿಕಾರ್ಯ ಪೂರ್ಣಗೊಳಿಸಿ: ಸಚಿವ ಈಶ್ವರಪ್ಪ ಸೂಚನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 4, 2019
in ಶಿವಮೊಗ್ಗ
0
ಜನವರಿ 1ರೊಳಗಾಗಿ ನಗರದ ರಸ್ತೆಗಳ ದುರಸ್ತಿಕಾರ್ಯ ಪೂರ್ಣಗೊಳಿಸಿ: ಸಚಿವ ಈಶ್ವರಪ್ಪ ಸೂಚನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ:
ಭಾರಿ ಮಳೆಯಿಂದಾಗಿ ಹಾಳಾಗಿರುವ ಮತ್ತು ಗುಂಡಿಬಿದ್ದಿರುವ ರಸ್ತೆಗಳನ್ನು ಜನವರಿ 1ರೊಳಗಾಗಿ ದುರಸ್ತಿಗೊಳಿಸಿ, ಸಾರ್ವಜನಿಕ ಅನುಕೂಲಕ್ಕೆ ಮುಕ್ತವಾಗಿರುವಂತೆ ನೋಡಿಕೊಳ್ಳಲು ಪಾಲಿಕೆ ಅಯುಕ್ತರಿಗೆ ಸೂಚಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್’ರಾಜ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಮಾರ್ಟ್‌ಸಿಟಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಕುರಿತು ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ಕಾಮಗಾರಿಗಳನ್ನು ಕೈಗೊಳ್ಳಲು ಹಾಗೂ ಹೊಸ ರಸ್ತೆಗಳ ನಿರ್ಮಾಣಕ್ಕೆ ಅಗತ್ಯ ಅನುದಾನವನ್ನು ಸರ್ಕಾರ ಈಗಾಗಲೇ ಬಿಡುಗಡೆ ಮಾಡಿದೆ ಎಂದರು.

ಶಿವಮೊಗ್ಗ ಸ್ಮಾರ್ಟ್‌ಸಿಟಿ ಯೋಜನೆಯಡಿ ಈಗಾಗಲೇ ಕೈಗೊಂಡಿರುವ ಹಾಗೂ ಕೈಗೊಳ್ಳಲು ಉದ್ದೇಶಿಸಿರುವ ಯೋಜನೆಗಳು ತ್ವರಿತಗತಿಯಲ್ಲಿ ಹಾಗೂ ನಿಗಧಿಪಡಿಸಿದ ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಅನುಕೂಲವಾಗುವಂತೆ ನಿರ್ವಹಣೆ ಮತ್ತು ಉಸ್ತುವಾರಿಗಾಗಿ ಪಾಲಿಕೆಯ ಇಂಜಿನಿಯರ್‌’ಗೆ ನಿಯೋಜಿಸುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಿದ ಅವರು, ಉಸ್ತುವಾರಿ ಅಧಿಕಾರಿಗಳು ತಮ್ಮ ಗುತ್ತಿಗೆದಾರರೊಂದಿಗೆ ಮುಂದಿನ ಸಭೆಗಳಲ್ಲಿ ಕಾಮಗಾರಿಗಳ ಪ್ರಗತಿಯ ಸಂಪೂರ್ಣ ವಿವರಗಳನ್ನು ಸಲ್ಲಿಸಲು ಸಿದ್ಧರಾಗಿರಬೇಕೆಂದವರು ಎಂದರು.

ನಗರದ ಸೌಂದರ್ಯ ಹೆಚ್ಚಿಸಲು ಅನುಕೂಲವಾಗುವಂತೆ ಪಾಲಿಕೆ ವ್ಯಾಪ್ತಿಯಲ್ಲಿ 32.00 ಕೋಟಿ ರೂ.ಗಳ ವೆಚ್ಚದಲ್ಲಿ 20,000 ಎಲ್’ಇಡಿ ದೀಪಗಳನ್ನು ಅಳವಡಿಸಲು ಖಾಸಗಿ ಸಂಸ್ಥೆಯೊಂದಕ್ಕೆ ಗುತ್ತಿಗೆ ನೀಡಲಾಗಿದೆ. ಈ ಗುತ್ತಿಗೆ ಅವಧಿಯು 7 ವರ್ಷಗಳಾಗಿದ್ದು, ಈ ಅವಧಿಯಲ್ಲಿ ಅದರ ಸಂಪೂರ್ಣ ನಿರ್ವಹಣೆ ಗುತ್ತಿಗೆದಾರರದ್ದೇ ಆಗಿರುತ್ತದೆ. ಈ ಸಂಬಂಧ ಇನ್ನಷ್ಟು ವಿವರಗಳ ಕುರಿತು ಚರ್ಚಿಸಲು ಎಲ್’ಇಡಿ ಬೀದಿದೀಪ ನಿರ್ವಹಣೆಗೆ ಗುತ್ತಿಗೆ ಹೊಂದಿರುವವರನ್ನು ಮುಂದಿನ ಸಭೆಗೆ ಆಹ್ವಾನಿಸುವಂತೆಯೂ ಸೂಚಿಸಿದ ಅವರು, ಜನವರಿ 15ರೊಳಗಾಗಿ ಅವರಿಗೆ ಕಾರ್ಯಾದೇಶ ನೀಡುವಂತೆಯೂ ಸೂಚಿಸಿದರು.

ಪಾಲಿಕೆ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳ ದುರಸ್ತಿಗೆ ಟೆಂಡರ್ ಪ್ರಕ್ರಿಯೆ ಚಾಲನೆಯಲ್ಲಿದ್ದು, ಕೂಡಲೇ ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕಾರ್ಯಾದೇಶ ನೀಡುವಂತೆ ಸೂಚಿಸಿದ ಅವರು, ಶಾಲೆಗಳ ಮೇಲುಸ್ತುವಾರಿ ಸಮಿತಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮಾಡುವ ಕಾಮಗಾರಿ ತ್ವರಿತ ಹಾಗೂ ಗುಣಮಟ್ಟದ್ದಾಗಿರುವಂತೆ ನೋಡಿಕೊಳ್ಳಲು ಸೂಚಿಸಿದರು.

ಶಾಲೆಗಳ ದುರಸ್ತಿಗೆ ಸಂಬಂಧಿಸಿದಂತೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿರುವುದು ಸರಿ. ಆದರೆ, ಪ್ರತಿ ಶಾಲೆಯಲ್ಲಿ ಕೈಗೊಳ್ಳಬೇಕಾದ ಕಾಮಗಾರಿಗಳ ಪೂರ್ಣ ವಿವರಗಳನ್ನು ಹೊಂದಿದ್ದು, ಅದರಂತೆಯೇ ಕಾಮಗಾರಿ ಪೂರ್ಣಗೊಳಿಸಲು ಕ್ರಮವಹಿಸಬೇಕು. ಅಲ್ಲದೇ ಶಾಲೆಗಳ ಶೌಚಾಲಯ ದುರಸ್ತಿಗೆ ಟೆಂಡರ್ ಪ್ರಕ್ರಿಯೆ ಕೂಡ ಪ್ರಗತಿಯಲ್ಲಿದ್ದು, ಪೂರ್ಣಗೊಳಿಸಿ, ಗುತ್ತಿಗೆದಾರರಿಗೆ ಕಾರ್ಯಾದೇಶ ನೀಡಿ, ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಸಚಿವರು ಆಯುಕ್ತರಿಗೆ ಸೂಚಿಸಿದರು.

ಶಿವಮೊಗ್ಗ ನಗರಕ್ಕೆ ಸಮೀಪದ ಗೋವಿಂದಾಪುರದಲ್ಲಿ ಆಶ್ರಯ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ತಾಂತ್ರಿಕ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆಗೊಂಡು ಶೀಘ್ರದಲ್ಲಿ ಬರುವ ನಿರೀಕ್ಷೆ ಇದೆ. ಅಂತೆಯೇ ತಕ್ಷಣ ಕಾಮಗಾರಿ ಆರಂಭಿಸಲು ಅನುಮತಿ ನೀಡಲಾಗುವುದು ಎಂದರು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್, ಪಾಲಿಕೆ ಮಹಾಪೌರರಾದ ಲತಾಗಣೇಶ್, ಉಪಮಹಾಪೌರರಾದ ಚನ್ನಬಸಪ್ಪ, ಪಾಲಿಕೆ ಆಯುಕ್ತ ಚಿದಾನಂದ ವಟಾರೆ, ಅಪರ ಜಿಲ್ಲಾಧಿಕಾರಿ ಜಿ. ಅನುರಾಧ ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: Heavy RainKannada NewsLEDMalnad NewsMinister K S EshwarappaShivamoggaSmart Cityಆಶ್ರಯ ಯೋಜನೆಎಲ್’ಇಡಿ ಬೀದಿದೀಪಮಳೆಶಿವಮೊಗ್ಗಸಚಿವ ಕೆ.ಎಸ್.ಈಶ್ವರಪ್ಪ
Share204Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

85ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಎಚ್.ಎಸ್. ವೆಂಕಟೇಶ ಮೂರ್ತಿ ಆಯ್ಕೆ

Next Post

ಗಮನಿಸಿ! ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ನಿಷೇಧ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗಮನಿಸಿ! ಶಬರಿಮಲೆಯಲ್ಲಿ ಇನ್ನು ಮುಂದೆ ಮೊಬೈಲ್ ಬಳಕೆ ನಿಷೇಧ

Leave a Reply Cancel reply

Your email address will not be published. Required fields are marked *

No Result
View All Result
Henkel appoints Pradhyumna Ingle as Country President for India
English Articles

Henkel appoints Pradhyumna Ingle as Country President for India

by ಕಲ್ಪ ನ್ಯೂಸ್
June 26, 2026
0

Kalpa Media House  |  Bengaluru  | Henkel has appointed Pradhyumna Ingle as Country President for India, reinforcing the company's commitment...

Read moreDetails
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL