ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಹೊಸಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳನ್ನು ಶೀಘ್ರ ಮುಕ್ತಾಯಗೊಳಿಸಿ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿಗಳನ್ನು ತಪ್ಪಿಸಿ ಎಂದು ಪಾಲಿಕೆ ಸದಸ್ಯೆ ರೇಖಾ ರಂಗನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
Also Read: ಪಂಚರಾಜ್ಯ ಚುನಾವಣಾ ಫಲಿತಾಂಶ ಕರ್ನಾಟಕದಲ್ಲಿ ಸಕಾರಾತ್ಮಕ ಉತ್ತೇಜನ ನೀಡಿದೆ: ಸಿಎಂ ಬೊಮ್ಮಾಯಿ
ಹೊಸಮನೆ ಬಡಾವಣೆಯಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಬಡಾವಣೆಯ ಎಲ್ಲಾ ರಸ್ತೆಗಳಿಗೂ ಡಾಂಬರೀಕರಣಕ್ಕೆ ಶ್ರೀ ವಜ್ರೇಶ್ವರಿ ಗಣಪತಿ ದೇವಸ್ಥಾನದ ಪಕ್ಕದ ರಸ್ತೆಯಿಂದ ಚಾಲನೆ ನೀಡಿ ಅವರು ಮಾತನಾಡಿದರು.
ಈಗಾಗಲೇ ಹೊಸಮನೆ ಬಡಾವಣೆಯೂ ಸಂಪೂರ್ಣ ಸ್ಮಾರ್ಟ್ ಸಿಟಿ ಕಾಮಗಾರಿಗಳು ಮುಗಿಯುವ ಹಂತದಲ್ಲಿ ಬಂದಿದ್ದು ಬಾಕ್ಸ್ ಡ್ರೈನೇಜ್, ವಿದ್ಯುತ್ ಭೂಗತ ಕೇಬಲ್’ಗಳು, 24×7 ನೀರಿನ ಸಂಪರ್ಕ, ಪಾರ್ಕಿಂಗ್ ಲಾಕಿಂಗ್ ಟೈಲ್ಸ್’ಗಳು ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಿ, ವಾರ್ಡಿನ ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿಯನ್ನು ತಪ್ಪಿಸಬೇಕೆಂದು ತಾಕೀತು ಮಾಡಿದರು.
Also Read: ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ನಲ್ಲಿ 51ನೇಯ ರಾಷ್ಟ್ರೀಯ ಸುರಕ್ಷತಾ ಸಪ್ತಾಹ ದಿನಾಚರಣೆ
ಈ ಸಂದರ್ಭದಲ್ಲಿ ಯುವ ಮುಖಂಡರಾದ ಕೆ. ರಂಗನಾಥ್, ವಾರ್ಡಿನ ಪ್ರಮುಖರಾದ ಶಿವಮ್ಮ, ಗಿರಿಜಮ್ಮ, ಯೋಗೀಶ್ ಭಟ್, ಚಂದ್ರು ಗಡ್ಡೆ, ಪ್ರಜ್ವಲ್, ಚೇತನಾ ಹಾಗೂ ವಾರ್ಡಿನ ನಾಗರಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post