ಕಲ್ಪ ಮೀಡಿಯಾ ಹೌಸ್ | ನವದೆಹಲಿ |
- ಐವರು ಸಚಿವರ ಮಕ್ಕಳ ಕೈ ಹಿಡಿದ ಕಾಂಗ್ರೆಸ್ ಹೈಕಮಾಂಡ್
- ಒಟ್ಟು 28 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಅಂತಿಮ
- ಚಿಕ್ಕಬಳ್ಳಾಪುರ, ಬಳ್ಳಾರಿ, ಚಾಮರಾಜನಗರ, ಕೋಲಾರ ಕ್ಷೇತ್ರ ಬಾಕಿ
- ಬಹುತೇಕ ಕಡೆ ಹೊಸಮುಖ, ಯುವಶಕ್ತಿಯತ್ತ ಕೈ ಒಲವು
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ #Congress ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಇಲ್ಲೂ ಸಹ ಕುಟುಂಬ ರಾಜಕಾರಣವೇ ಮೈಲುಗೈ ಸಾಧಿಸಿದೆ.
ಇಂದು ಸಂಜೆ ಅಧಿಕೃತ ಪಟ್ಟಿಯನ್ನು ಘೋಷಣೆ ಮಾಡಿದ್ದು, ರಾಜ್ಯದ ಕೆಲವು ಸಚಿವರ ಕುಟುಂಬದವರಿಗೇ ಟಿಕೇಟ್ ದೊರೆತಿದೆ.
ಕಾಂಗ್ರೆಸ್ ತನ್ನ ಸಹಜ ಎದುರಾಳಿ ಭಾರತೀಯ ಜನತಾ ಪಕ್ಷಕ್ಕೆ ಸಡ್ಡುಹೊಡೆಯೆಲು ಹಲವು ಕಡೆ ಯುವಶಕ್ತಿಯತ್ತ ಮುಖ ಮಾಡಿದೆ. ಕಾಂಗ್ರೆಸ್ ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿಗೆ ಕಲಬುರಗಿ ಕ್ಷೇತ್ರದಲ್ಲಿ ಅವಕಾಶವನ್ನು ನೀಡಲಾಗಿದೆ. ಇದರ ಮುಖಾಂತರ ಖರ್ಗೆ ಕುಟುಂಬದ ಪಾರುಪತ್ಯ ಮುಂದುವರೆಸಲು ಹಸಿರು ನಿಶಾನೆ ತೋರಿದ್ದಾರೆ.
ಅತ್ತ ಬೆಳಗಾವಿಯಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್’ಗೆ ಟಿಕೆಟ್ ದೊರಕಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಭಾವಿ ಸಚಿವರಾದ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕಾಗೆ ಚಿಕ್ಕೋಡಿಯಿಂದ ಕಣಕ್ಕಿಳಿಯಲು ಹೈಕಮಾಂಡ್ ಅನುಮತಿ ನೀಡಿದೆ.
- ಮೈಸೂರಿನಲ್ಲಿ ಬಿಜೆಪಿಯ ರಾಜವಂಶಸ್ಥ ಯದುವೀರ್ ಒಡೆಯರ್ ಹಾಗೂ ಕಾಂಗ್ರೆಸ್ ನ ಎಂ. ಲಕ್ಷ್ಮಣ್
- ಬೆಂಗಳೂರು ದಕ್ಷಿಣ ಬಿಜೆಪಿಯ ಸಂಸದ ತೇಜಸ್ವಿ ಸೂರ್ಯ ಹಾಗೂ ಕಾಂಗ್ರೆಸ್ ನ ಸೌಮ್ಯಾ ರೆಡ್ಡಿ
- ಉಡುಪಿ, ಚಿಕ್ಕಮಗಳೂರು ಬಿಜೆಪಿಯ ಕೋಟಾ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ
- ದಾವಣಗೆರೆಯಲ್ಲಿ ಬಿಜೆಪಿಯ ಗಾಯತ್ರಿ ಸಿದ್ದೇಶ್ವರ ಹಾಗೂ ಕಾಂಗ್ರೆಸ್ ನ ಪ್ರಭಾವತಿ ಮಲ್ಲಿಕಾರ್ಜುನ್
- ಬೆಂಗಳೂರು ಸೆಂಟ್ರಲ್ ಬಿಜೆಪಿಯ ಸಂಸದ ಪಿ.ಸಿ. ಮೋಹನ್ ಹಾಗೂ ಕಾಂಗ್ರೆಸ್ ನ ಮನ್ಸೂರ್ ಅಲಿ ಖಾನ್
ಬೆಂಗಳೂರು ದಕ್ಷಿಣದಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಮತ್ತೊಮ್ಮೆ ಅಗ್ನಿಪರೀಕ್ಷೆ ಎದುರಿಸಲು ಸಜ್ಜಾಗಿದ್ದಾರೆ. ಬೀದರ್’ನಲ್ಲಿ ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ್‌ಖಂಡ್ರೆ ಹೆಸರು ಘೋಷಣೆಯಾಗಿದೆ. ದಾವಣಗೆರೆಯಲ್ಲಿ ಹಿರಿಯ ಸಚಿವ ಶಾಮನೂರು ಶಿವಶಂಕರಪ್ಪ ಸೊಸೆ ಪ್ರಭಾ ಮಲ್ಲಿಕಾರ್ಜುನ ಕಣಕ್ಕಿಳಿಯಲಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್ ಬೆನ್ನಿಗೂ ಕಾಂಗ್ರೆಸ್ ಹೈಕಮಾಂಡ್ ಶ್ರೀರಕ್ಷೆ ದೊರಕಿದೆ.
ಬೆಂಗಳೂರು ದಕ್ಷಿಣದಲ್ಲಿ ಸೌಮ್ಯಾ ರೆಡ್ಡಿ ವಿರುದ್ದ ಬಿಜೆಪಿಯ ಯೂತ್ ಐಕಾನ್ ತೇಜಸ್ವಿ ಸೂರ್ಯ ಸೆಣೆಸಲಿದ್ದಾರೆ. ದಾವಣಗೆರೆಯಲ್ಲಿ ಮಾಜಿ ಸಂಸದ ಎಸ್.ಎಸ್. ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ ವಿರುದ್ಧ ಬಿಜೆಪಿ ಹಾಲಿ ಸಂಸದ ಜಿ.ಎಂ. ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ ಕಣದಲ್ಲಿ ಇರಲಿದ್ದಾರೆ.
ಘೋಷಣೆಯಾದ 17 ಕ್ಷೇತ್ರಗಳ ಕೈ ಅಭ್ಯರ್ಥಿಗಳು
- ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ-ಸೌಮ್ಯಾರೆಡ್ಡಿ
- ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ-ಎಂ.ವಿ. ರಾಜೀವ್ ಗೌಡ
- ಬಾಗಲಕೋಟೆ ಲೋಕಸಭಾ ಕ್ಷೇತ್ರ-ಸಂಯುಕ್ತಾ ಪಾಟೀಲ್
- ಮೈಸೂರು ಲೋಕಸಭಾ ಕ್ಷೇತ್ರ-ಎಂ. ಲಕ್ಷ್ಮಣ್
- ಕಲಬುರಗಿ ಲೋಕಸಭಾ ಕ್ಷೇತ್ರ-ರಾಧಾಕೃಷ್ಣ ದೊಡ್ಡಮನಿ
- ದಾವಣಗೆರೆ ಲೋಕಸಭಾ ಕ್ಷೇತ್ರ-ಪ್ರಭಾ ಮಲ್ಲಿಕಾರ್ಜುನ
- ಬೆಂಗಳೂರು ಸೆಂಟ್ರಲ್ ಕ್ಷೇತ್ರ-ಮನ್ಸೂರ್ ಅಲಿಖಾನ್
- ಉತ್ತರ ಕನ್ನಡ ಕ್ಷೇತ್ರ-ಡಾ.ಅಂಜಲಿ ನಿಂಬಾಳ್ಕರ್
- ಧಾರವಾಡ ಲೋಕಸಭಾ ಕ್ಷೇತ್ರ-ವಿನೋದ್ ಅಸೋಟಿ
- ಚಿತ್ರದುರ್ಗ ಲೋಕಸಭಾ ಕ್ಷೇತ್ರ-ಬಿ.ಎನ್.ಚಂದ್ರಪ್ಪ
- ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ-ಪದ್ಮರಾಜ್
- ಉಡುಪಿ, ಚಿಕ್ಕಮಗಳೂರು ಕ್ಷೇತ್ರ-ಜಯಪ್ರಕಾಶ್ ಹೆಗ್ಡೆ
- ಕೊಪ್ಪಳ ಲೋಕಸಭಾ ಕ್ಷೇತ್ರ-ರಾಜಶೇಖರ್ ಹಿಟ್ನಾಳ್
- ಬೀದರ್ ಲೋಕಸಭಾ ಕ್ಷೇತ್ರ-ಸಾಗರ್ ಖಂಡ್ರೆ
- ರಾಯಚೂರು ಲೋಕಸಭಾ ಕ್ಷೇತ್ರ-ಕುಮಾರ್ ಜಿ ನಾಯಕ್
- ಬೆಳಗಾವಿ ಲೋಕಸಭಾ ಕ್ಷೇತ್ರ-ಮೃಣಾಲ್ ಹೆಬ್ಬಾಳ್ಕರ್
- ಚಿಕ್ಕೋಡಿ ಲೋಕಸಭಾ ಕ್ಷೇತ್ರ-ಪ್ರಿಯಾಂಕಾ ಜಾರಕಿಹೊಳಿ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post