ಪಾಟ್ನಾ: ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ದೂರವಿಡುವುದು ನಮ್ಮ ಗುರಿ. ಇದರ ಪ್ರಯತ್ನದ ಹಾದಿಯಲ್ಲಿ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಲೂ ಸಹ ಕಾಂಗ್ರೆಸ್ ಸಿದ್ದವಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ನರೇಂದ್ರ ಮೋದಿ ಅವರನ್ನು ಪ್ರಧಾನಿ ಹುದ್ದೆಯಿಂದ ದೂರವಿಡುವುದು ನಮ್ಮೆಲ್ಲರ ಸ್ಪಷ್ಟ ಗುರಿ. ಹೀಗಾಗಿ, ಮಿತ್ರಪಕ್ಷಗಳೊಂದಿಗೆ ಸರ್ಕಾರ ರಚಿಸುವ ಅವಕಾಶ ಬಂದರೂ ನಾವು ಪ್ರಧಾನಿ ಹುದ್ದೆಯ ತ್ಯಾಗಕ್ಕೂ ಸಿದ್ದ ಎಂದಿದ್ದಾರೆ.
ಗುಲಾಂ ಹೇಳಿಕೆಗೆ ಕಾಂಗ್ರೆಸ್ ಪಕ್ಷದಿಂದ ಈವರೆಗೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ.

















